ವೇಶ್ಯೆಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರು ನಡೆದು ಬಂದ ದಾರಿ

Author : ಶಿವರಾಮಯ್ಯ

Pages 160

₹ 100.00




Year of Publication: 2012
Published by: ಸೃಷ್ಟಿ ಪಬ್ಲಿಕೇಷನ್ಸ್
Address: ನಂ. 121, 13 ನೇ ಮುಖ್ಯರಸ್ತೆ, ಎಂ. ಸಿ. ಲೇಜೌಟ್, ವಿಜಯನಗರ, ಬೆಂಗಳೂರು 560040
Phone: 9845096668

Synopsys

ಆಧುನಿಕ ವೇಶ್ಯೆಯರ ಅಥವಾ ಲೈಂಗಿಕ ಕಾರ್ಯಕರ್ತೆಯರ ಪರಿಚಯದ ಹಿನ್ನೆಲೆಯಲ್ಲಿ ಭದ್ರಬುನಾದಿಯಂತೆ ಪೂರಕವಾಗಿ  ಪ್ರಾಚೀನ ಕಾವ್ಯಪುರಾಣ – ಇತಿಹಾಸಗಳಲ್ಲಿ ಇರುವ ವೇಶ್ಯಾ ಲೋಕದ ವಿವಿಧ ಆಯಾಮಗಳನ್ನು ಲೇಖಕ ಪ್ರೊ. ಶಿವರಾಮಯ್ಯ ಅವರು ’ ವೇಶ್ಯೆಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರು ನಡೆದು ಬಂದ ದಾರಿ’ ಕೃತಿಯಲ್ಲಿ ಪರಿಚಯಿಸಿದ್ದಾರೆ.

ವೇಶ್ಯಾವೃತ್ತಿ (ಪ್ರಾಸ್ಟಿಟ್ಯೂಶನ್ ) , ಪ್ರಾಚೀನ ಕಾವ್ಯಗಳಲ್ಲಿ ವೇಶ್ಯಾವಾಟಿಕೆ ವರ್ಣನೆ, ವೇಶ್ಯೆಯರು ಯಾರು ?, ಎನ್ನುವ ಅನೇಕ ಮಾಹಿತಿ, ವಿವರಗಳನ್ನು ನೀಡುತ್ತದೆ. ಇದಕ್ಕೆ ಪೂರಕವಾಗಿ ಲೇಖಕರು ಮಾಹಿತಿ ಸಂಗ್ರಹ ಮತ್ತು ಸಂಶೋಧನೆಯು ಲೈಂಗಿಕ ಅಲ್ಪಸಂಖ್ಯಾತರು (ಟ್ರಾನ್ಸ್ ಜೆಂಡರ್‍ಸ್) ಯಾರು? ಸಲಿಂಗ ಕಾಮಿಗಳು (ಗೇಸ್ ಮತ್ತು ಲೆಸ್ಬಿಯನ್ಸ್) ಯಾರು ? ಎನ್ನುವ ಸಂಗತಿಗಳನ್ನೂ ಕುರಿತು ಚರ್ಚಿಸುತ್ತದೆ.

About the Author

ಶಿವರಾಮಯ್ಯ
(10 August 1940)

ಪ್ರೊ. ಶಿವರಾಮಯ್ಯ ನವರು ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕ್ ಅವಿನಮಡು ಗ್ರಾಮದಲ್ಲಿ 1940 ರ ಆಗಸ್ಟ್‌ 10ರಂದು ಜನಿಸಿದರು. ತಂದೆ ಕಂಪಲಪ್ಪ, ತಾಯಿ ಬೋರಮ್ಮ, ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವಿ ಪಡೆದ ಅವರು ಕನ್ನಡ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ಅಧ್ಯಾಪನ ಹಾಗೂ ಸಂಶೋಧನ ವೃತ್ತಿಯ ಜೊತೆಯಲ್ಲಿಯೇ ಜನಪರ ಸಂಘಟನೆಗಳೊಂದಿಗೆ ಗುರುತಿಸಿಕೊಂಡರು. ಸಕ್ರಿಯ ಹೋರಾಟಗಳಲ್ಲಿ ಭಾಗವಹಿಸುತ್ತಾ ಬಂದಿದ್ದಾರೆ.  ಸ್ವಪ್ನ ಸಂಚಯ (ಕವನ ಸಂಕಲನ), ಬೌದ್ಧ ಭಿಕ್ಷಣಿ (ಮಕ್ಕಳ ಪುಸ್ತಕ ), ಸಾಹಿತ್ಯ ಪರಿಸರ, ಉರಿಯ ಉಯಾಲೆ (ವಿಮರ್ಶೆ), ಹರಿಹರ-ರಾಘವಾಂಕ (ಜಾನಪದ ಅಧ್ಯಯನ), ದನಿ ಇಲ್ಲದವರ ದನಿ, ಕುದುರೆಮುಖ (ವೈಚಾರಿಕ), ಇವರ ಕೆಲವು ಪ್ರಕಟಿತ ಕೃತಿಗಳು. ''ನಾಡೋಜ ...

READ MORE

Related Books