ಖ್ಯಾತ ವಿದ್ವಾಂಸ ಶತಾವಧಾನಿ ಡಾ. ಆರ್. ಗಣೇಶ್ ಅವರು ವಿರಚಿತ ಕೃತಿ- ವಿಭೂತಿ ಪುರುಷ ವಿದ್ಯಾರಣ್ಯ. ವಿಜಯನಗರ ಸಾಮ್ರಾಜ್ಯ ಸಂಸ್ಥಾಪಕ ವಿದ್ಯಾರಣ್ಯರ ಜೀವನ ಚರಿತ್ರೆ, ಅವರು ಸಾಮ್ರಾಜ್ಯ ಸ್ಥಾಪನೆಗೆ ಪಟ್ಟ ಶ್ರಮ, ತೋರಿದ ದೂರದೃಷ್ಟಿ, ಆಡಳಿತದ ಜಾಣ್ಮೆ ಇತ್ಯಾದಿ ಅಂಶಗಳು ಈ ಕೃತಿಯ ವೈಶಿಷ್ಟ್ಯಗಳಾಗಿವೆ.
ಶತಾವಧಾನಿ ಗಣೇಶ ಅವರು ಉತ್ತಮ ವಾಗ್ಮಿಗಳು. ವಿದ್ವಾಂಸರು. ಅವಧಾನ ಕಲೆಯನ್ನು ರೂಢಿಸಿಕೊಂಡವರು. “ಕನ್ನಡದಲ್ಲಿ ಅವಧಾನ ಕಲೆ” ಎಂಬ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಪ್ರಪ್ರಥಮ ಡಿ.ಲಿಟ್. ಪದವಿ ನೀಡಿ ಗೌರವಿಸಿದೆ. ಪ್ರಸ್ತುತ ಭಾರತೀಯ ವಿದ್ಯಾಭವನದ ಬೆಂಗಳೂರು ಶಾಖೆಯ ಸಂಸ್ಕೃತ ವಿಭಾಗದ ನಿರ್ದೇಶಕರಾಗಿದ್ದಾರೆ. ಆರ್.ಶಂಕರನಾರಾಯಣ ಅಯ್ಯರ್ ಹಾಗೂ ಅಲಮೇಲಮ್ಮ ದಂಪತಿಯ ಪುತ್ರರು.04-12-1962ರಂದು ಕೋಲಾರದಲ್ಲಿ ಜನನ. ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ (UVCE), ದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರು. ಬೆಂಗಳೂರಿನ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸೈನ್ಸ್ ನಲ್ಲಿ ಮೆಟೀರಿಯಲ್ ಸೈನ್ಸ್ ಹಾಗೂ ಮೆಟಲರ್ಜಿಯಲ್ಲಿ ಎಂ.ಎಸ್ಸಿ. ಪದವೀಧರರು. ಮೈಸೂರ್ ವಿಶ್ವವಿದ್ಯಾಲಯದ ಅಡಿಯಲ್ಲಿ ...
READ MORE