`ವಿಚಾರ ಲಹರಿ` ಎಂಬ ಕೃತಿಯು ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲರ ಭಾಷಣಗಳು ಹಾಗೂ ಲೇಖನಗಳಿಂದ ಅನೇಕ ವಿಚಾರಗಳನ್ನು ಬಿಂಬಿಸುವ ಹೇಳಿಕೆಗಳ ಸಂಗ್ರಹವಾಗಿದೆ. ಈ ಕೃತಿಯ ಸಂಪಾದಕತ್ವವನ್ನು ಸಂಸ್ಕೃತಿ ಸುಬ್ರಹ್ಮಣ್ಯ ಅವರು ವಹಿಸಿಕೊಂಡು ಕೃತಿಯನ್ನು ಹೊರತಂದಿದ್ದಾರೆ..ತುಷಾರ, ಲಂಕೇಶ್ ಪತ್ರಿಕೆ, ಸಂಕ್ರಮಣ, ಕನ್ನಡ ಕನ್ನಡ ಬನ್ನಿ ನಮ್ಮ ಸಂಗಡ, ಅಗ್ನಿ, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಹಲವು ವರ್ಷಗಳಿಂದ ಪ್ರಕಟವಾದ ಬರಹಗಳ ತುಣುಕುಗಳು, ಭಾಷಣಗಳ ಬಿಡಿ ಭಾಗಗಳ ಸಂಗ್ರಹ ಈ ಕೃತಿಯಲ್ಲಿ ಲಭ್ಯವಿದೆ.
'ಚಂಪಾ' ಎಂದೇ ಕನ್ನಡ ಸಾಹಿತ್ಯಲೋಕದಲ್ಲಿ ಚಿರಪರಿಚಿತ ಇರುವ ಚಂದ್ರಶೇಖರ ಪಾಟೀಲರು ಕವಿ-ನಾಟಕಕಾರ. ಕನ್ನಡನಾಡಿನ ಸಾಹಿತ್ಯಕ, ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಚಳುವಳಿಗಳ ಮುಂಚೂಣಿಯಲ್ಲಿ ಕೇಳಿಬರುವ ಹೆಸರು ’ಚಂಪಾ’ ಅವರದು. ಹಾವೇರಿ ಜಿಲ್ಲೆಯ ಹತ್ತೀಮತ್ತೂರಿನಲ್ಲಿ ಜನಿಸಿದರು (1939). ತಂದೆ ಬಸವರಾಜ ಹಿರೇಗೌಡ ಪಾಟೀಲ, ತಾಯಿ ಮುರಿಗೆವ್ವ. ಹತ್ತೀಮುತ್ತೂರಿನಲ್ಲಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ವಿದ್ಯಾಭ್ಯಾಸ, ಹಾವೇರಿಯಲ್ಲಿ ಹೈಸ್ಕೂಲು ಶಿಕ್ಷಣ ಪಡೆದ ಅವರು ಹೆಚ್ಚಿನ ಅಧ್ಯಯನಕ್ಕಾಗಿ ಧಾರವಾಡದ ಕರ್ನಾಟಕ ಕಾಲೇಜು ಸೇರಿದರು. ಕಾಲೇಜಿನಲ್ಲಿದ್ದ ದಿನಗಳಲ್ಲಿಯೇ 'ಚಂಪಾ' ಅವರ ಅಕ್ಷರಗಳಿಗೆ ಕಾವ್ಯದ ಗರಿ ಮೂಡಿದವು. ಆಗ ಖ್ಯಾತ ಕವಿ ಗೋಕಾಕರು ಕರ್ನಾಟಕ ಕಾಲೇಜಿನಲ್ಲಿದ್ದರು. ’ನಮಗೆಲ್ಲ ...
READ MORE