ವಿದ್ಯಾರ್ಥಿ ವಿಕಾಸದ ಹಂತಗಳು ಒಂದು ಮಗುವಿನ ವ್ಯಕ್ತಿತ್ವರೂಪುಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತವಾದ್ದರಿಂದ ಈ ವಿಕಾಸದ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಗಳು ಸಮಾಜದಿಂದ ಏನನ್ನು ಪಡೆಯುತ್ತಾರೊ ದೊಡ್ಡವರಾದ ಮೇಲೆ ಅದನ್ನೇ ಸಮಾಜಕ್ಕೇ ನೀಡುತ್ತಾರೆ. ಅಂತಹ ಸಮಯದಲ್ಲಿ ಹೆತ್ತವರು, ಶಿಕ್ಷಕರು, ಯಾವ ರಿತಿಯಲ್ಲಿ ಒಬ್ಬ ವಿದ್ಯಾಥಿಯೊಂದಿಗೆ ವರ್ತಿಸಬೇಕು? ಹೇಗೆ ವರ್ತಿಸಬಾರದು? ವಿದ್ಯಾರ್ಥಿ ವಿಕಾಸನದ ಹಂತಗಳು ಯಾವುವು? ಎಂಬೂದನ್ನು ಈ ಪುಸ್ತಕದಲ್ಲಿ ವಿಮರ್ಶಿಸಲಾಗಿದೆ.
ಅರವಿಂದ ಚೊಕ್ಕಾಡಿ ಅವರು 1975ರ ಡಿಸೆಂಬರ್ 21ರಂದು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಮಾಲೆತ್ತೋಡಿ ಎಂಬಲ್ಲಿ ಜನಿಸಿದರು. ತಂದೆ ಕುಕ್ಕೆಮನೆ ವೆಂಕಟ್ರಮಣಯ್ಯ ಗೋಪಾಲ ಶರ್ಮ. ತಾಯಿ ಪಾರ್ವತಿ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಚಕ್ಕಾಡಿಯಲ್ಲಿ ಮುಗಿಸಿ ಪದವಿ ಪೂರ್ವ ಮತ್ತು ಬಿ.ಎ ಪದವಿಯನ್ನು ಸುಳ್ಯದ ನೆಕರೂ ಮೆಮೋರಿಯಲ್ ಕಾಲೇಜಿನಲ್ಲಿ ಪಡೆದರು. ಮಂಗಳೂರಿನ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯದಿಂದ ಬಿ. ಇಡ್. ಪದವೀಧರರಾಗಿರುವ ಇವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಎಂ. ಎ ಪದವಿ ಪಡೆದರು. 2011 ರಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ...
READ MORE