ವಿಕ್ರಮ್ ಸಾರಾಭಾಯಿ ಭಾರತೀಯ ಬಾಹ್ಯಾಕಾಶ ವಿಜ್ಞಾನದ ಪಿತಾಮಹ. 1966ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿ ಹಾಗೂ 1972ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಯು ಮರಣೋತ್ತರವಾಗಿ ದೊರೆಯಿತು. ಅವರ ಬಾಲ್ಯ, ಬದುಕು-ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು, ಜೀವಮಾನ ಸಾಧನೆಗಳನ್ನು ಇಲ್ಲಿ ಲೇಖಕರು ಕುತೂಹಲಕಾರಿಯಾಗಿ ನೀಡಿದ್ದು, ಡಾ. ನಾ. ಸೋಮೇಶ್ವರ ಕೃತಿಯನ್ನು ಸಂಪಾದಿಸಿದ್ದಾರೆ.
ರೋಹಿತ್ ಚಕ್ರತೀರ್ಥ, ಓದಿದ್ದು ವಿಜ್ಞಾನ, ಮುಖ್ಯವಾಗಿ ಗಣಿತ. ಬೆಂಗಳೂರಿನಲ್ಲಿ ನಾಲ್ಕು ವರ್ಷ ಉಪನ್ಯಾಸಕರಾಗಿ ಕಾಲೇಜುಗಳಲ್ಲಿ ಪಾಠ ಮಾಡಿ, ಈಗ ಬಹುರಾಷ್ಟ್ರೀಯ ಕಂಪೆನಿಯಲ್ಲಿ ಉದ್ಯೋಗಿ. ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡು, ಹಲವು ಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆದಿದ್ದಾರೆ. ಜೊತೆಗೆ ವಿಜ್ಞಾನ, ಗಣಿತ, ವ್ಯಕ್ತಿಚಿತ್ರ, ಮಕ್ಕಳ ಕತೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಇದುವರೆಗೆ 13 ಪುಸ್ತಕಗಳು ಪ್ರಕಟಣೆಯಾಗಿವೆ. ಉದ್ಯೋಗ ಮತ್ತು ಬರವಣಿಗೆಯಿಂದ ಬಿಡುವು ಸಿಕ್ಕಾಗ ತಿರುಗಾಟ, ಪ್ರವಾಸ ಇವರ ಹವ್ಯಾಸ., ...
READ MORE