ವಿಮರ್ಶೆ ೧

Author : ಮಾಸ್ತಿ ವೆಂಕಟೇಶ್ ಅಯ್ಯಂಗಾರ್ (ಶ್ರೀನಿವಾಸ)

Pages 117

₹ 1.00




Year of Publication: 1954
Published by: ಜೀವನ ಕಾರ್ಯಾಲಯ

Synopsys

ವಿಮರ್ಶೆ ೧ ಎಂಬ ಪುಸ್ತಕವು ಮಾಸ್ತಿ ವೆಂಕಟೇಶ ಅಯ್ಯಂಗಾರ್‌ ಅವರ ಕೃತಿಯಾಗಿದೆ. ಈ ಪುಸ್ತಕದಲ್ಲಿ ನಾಲ್ಕು ಲೇಖನಗಳಿವೆ. ಕೃತಿ ವಿಮರ್ಶೆಯ ವಿಚಾರ, ವೈಷ್ಣವದಾಸರನ್ನು ಕುರಿತ ಲೇಖನ, ಲಾವಣಿಗಳನ್ನು ಕುರಿತ ಲೇಖನ, ಸತೀಹಿತೈಷಿಣಿ ಗ್ರಂಥಮಾಲೆಯನ್ನು ಕುರಿತ ಬರಹಗಳು ಇಲ್ಲಿವೆ.

About the Author

ಮಾಸ್ತಿ ವೆಂಕಟೇಶ್ ಅಯ್ಯಂಗಾರ್ (ಶ್ರೀನಿವಾಸ)
(08 June 1891 - 07 June 1986)

‘ಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರು ಕನ್ನಡ ಸಣ್ಣಕತೆಗಳ ರಚನೆಗೆ ಖಚಿತ ರೂಪ ನೀಡುವುದಕ್ಕೆ ಕಾರಣರಾದ ಆದ್ಯರು. ಕೋಲಾರದ ಮಾಲೂರಿನ ಮಾಸ್ತಿ ಗ್ರಾಮದಲ್ಲಿ 1891ರ ಜೂನ್ 8ರಂದು ಜನಿಸಿದರು. ತಂದೆ ರಾಮಸ್ವಾಮಿ ಅಯ್ಯಂಗಾರ್ ತಾಯಿ ತಿರುಮಲ್ಲಮ್ಮ. ಪ್ರೌಢವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಎಫ್.ಎ. ಅನ್ನು ಮಹಾರಾಜ ಕಾಲೇಜಿನಲ್ಲೂ ಮುಗಿಸಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ ಮುಗಿಸಿ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಎಂಎ ಪದವಿ (1914) ಪಡೆದರು. ಮೈಸೂರು ಸರ್ಕಾರದ ಅಸಿಸ್ಟೆಂಟ್ ಕಮೀಷನರ್ (1914) ಆಗಿ ಕೆಲಸಕ್ಕೆ ಸೇರಿದರು. ಸರ್ ಎಂ. ವಿಶ್ವೇಶ್ವರಯ್ಯನವರ ಕೈಕೆಳಗೆ ಕೆಲಸ ಮಾಡಿದ ...

READ MORE

Related Books