ವಿಮರ್ಶೆ ಎಂದರೆ ಚರ್ಚೆ ಎನ್ನುವ ಅರ್ಥವಿದೆ. ಆಧುನಿಕ ಯುರೋಪ್ ನ ವಿಮರ್ಶೆಯು ರೂಪುಗೊಂಡಿರುವುದು ಪ್ರಭುತ್ವದ ಸರ್ವೋಚ್ಛ ಅಧಿಕಾರವನ್ನು ಪ್ರಶ್ನಿಸುವ ಮೂಲಕ. ಭಾರತದಲ್ಲಿ ಸಾಹಿತ್ಯ ವಿಮರ್ಶೆಯು ಹುಟ್ಟಿರುವುದು ವಸಾಹತುಶಾಹಿ ಪ್ರಭುತ್ವದ ಸಂದರ್ಭದಲ್ಲಿ.
ಉದಾರವಾದಿ ಚಿಂತನೆ ಮಾನವತಾವಾದದ ಚಿಂತನೆ ಮತ್ತು ಸ್ವ-ಸಂಸ್ಕೃತಿಯ ಆರಾಧನೆ ಹಾಗೂ ಪಶ್ಚಿಮದ ಸಾಹಿತ್ಯಿಕ ರೂಪಗಳೊಂದಿಗೆ ವಿಶಿಷ್ಟ ಸಂವಾದದ ಕಾರಣದಿಂದ ಸಾಹಿತ್ಯ ವಿಮರ್ಶೆ ಹುಟ್ಟಿಕೊಂಡಿತು. ಸಾಹಿತ್ಯ ವಿಮರ್ಶೆಯು ಸಾಹಿತ್ಯಕ ಬುದ್ದಿಜೀವಿಗಳ ಮತ್ತು ಸಾಮಾನ್ಯ ಓದುಗರ ನಡುವೆ ನಡೆಯುವ ಸಂವಾದಗಳಾಗಿವೆ.
ಸಾಹಿತ್ಯ ವಿಮರ್ಶೆಯು ವ್ಯಕ್ತಿಯಿಂದ ವ್ಯಕ್ತಿಗೆ ಸಂವಹನಗೊಳ್ಳುವ ಒಂದು ಮಾಧ್ಯಮ. ಅದರಿಂದಲೇ ಅನೇಕ ವಸ್ತು ವಿಷಯಗಳಾದಂತಹ ಅಭಿವ್ಯಕ್ತಿಯ ಸಾಧ್ಯತೆ, ಅಭಿವ್ಯಕ್ತಿ ಮತ್ತು ಆಲೋಚನೆಯ ಕ್ರಮ, ಆಗಮಿಕ ಕಾವ್ಯ, ಆದರ್ಶ ಮತ್ತು ವಾಸ್ತವ, ಆಧುನಿಕ ಕಾವ್ಯ, ಗದ್ಯ, ಸಾಹಿತ್ಯ, ಆಧುನಿಕ ವೈಜ್ಞಾನಿಕ ಮನೋಧರ್ಮ, ಆಂತರಿಕ ತರ್ಕ, ಆಕ್ಷೇಪಾಲಂಕಾರ, ಅಲಂಕಾರ ಶಾಸ್ತ್ರ, ಅಭಿಪ್ರಾಯದ ಮಂಡನೆ, ಅರ್ಥಪಲ್ಲಟ, ಇನ್ನೂ ಅನೇಕ ವಿಷಯಗಳನ್ನೊಳಗೊಂಡ ಕೃತಿ ’ವಿಮರ್ಶೆಯ ಪರಿಕಲ್ಪನೆಗಳು’.
ಲೇಖಕ ಕೇಶವ ಶರ್ಮ ಕೆ. ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕದ ಹತ್ತಿರವಿರುವ ಕೋಡಂದೂರಿನವರು. ತಂದೆ ದಿವಂಗತ ಕೆ.ಕೆ. ನರಸಿಂಹಭಟ್ಟ, ತಾಯಿ ಕೆ.ಎನ್.ಸೀತಾ. ಲೇಖಕಿ ಸಬಿತಾ ಬನ್ನಾಡಿ ಕೇಶವ ಶರ್ಮ ಅವರ ಬಾಳ ಸಂಗಾತಿ. ಯಕ್ಷಗಾನದತ್ತ ಒಲವಿದ್ದ ಕೇಶವ ಶರ್ಮ ಅವರು ಹವ್ಯಾಸಿ ಯಕ್ಷಗಾನದ ಕಲಾವಿದರಾಗಿಯೂ ಗುರುತಿಸಿಕೊಂಡಿದ್ದಾರೆ. ಸದ್ಯ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿಂಗನ ಮನೆ ಗ್ರಾಮ ಶಾಂತಿನಗರದಲ್ಲಿ ನೆಲೆಸಿದ್ದಾರೆ. ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಕೇಶವ ಶರ್ಮ ಅವರು ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ಹೆಣ್ಣಿನ ಪರಿಕಲ್ಪನೆ ವಿಷಯದಡಿ ಪಿಎಚ್.ಡಿ ...
READ MORE