ಪರಿಶೀಲನ, ಸೌಂದರ್ಯ ಸಮೀಕ್ಷೆ, ಕಾವ್ಯಾರ್ಥ ಚಿಂತನ, ಮಹಾಕಾವ್ಯ ಸ್ವರೂಪ, ಅನುರಣನ, ಕನ್ನಡ ಕವಿಗಳ ಕಾವ್ಯಕಲ್ಪನೆ ಇವು ಕವಿ ಜಿ.ಎಸ್. ಶಿವರುದ್ರಪ್ಪ ಅವರ ವಿಮರ್ಶಾ ಕೃತಿಗಳ ಪೈಕಿ ವಿಮರ್ಶೆಯ ಪೂರ್ವ ಪಶ್ಚಿಮ ಕೃತಿಯೂ ಒಂದು. ವಿಮರ್ಶೆಯ ಸ್ವರೂಪ-ಮಾನದಂಡಗಳು ಕಾಲಕಾಲಕ್ಕೆ ಬದಲಾಗುತ್ತಿದ್ದು, ಅದರ ಸ್ವರೂಪ ಪೂರ್ವ-ಪಶ್ಚಿಮ ದೇಶಗಳಲ್ಲಿಯ ಭಿನ್ನತೆ-ಸಾಮ್ಯತೆಗಳನ್ನು ತೌಲನಿಕವಾಗಿ ಅಧ್ಯಯನ ಮಾಡಿದ್ದು, ಕೃತಿಯ ವೈಶಿಷ್ಟ್ಯ.
ಸಮನ್ವಯ ಕವಿಗಳಲ್ಲಿ ಒಬ್ಬರು ಎಂದು ಗುರುತಿಸಲಾಗುವ ಡಾ.ಜಿ.ಎಸ್. ಶಿವರುದ್ರಪ್ಪ ಅವರು ವಿಮರ್ಶಕರಾಗಿಯೂ ಗಣನೀಯ ಸಾಧನೆ ಮಾಡಿದ್ದಾರೆ. ಗದ್ಯ-ಪದ್ಯಗಳೆರಡರಲ್ಲಿಯೂ ಮಾಗಿದ ಪ್ರತಿಭೆ ಅವರದು. ತಂದೆ ಗುಗ್ಗುರಿ ಶಾಂತವೀರಪ್ಪ ಮತ್ತು ತಾಯಿ ವೀರಮ್ಮ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ 1926ರ ಫೆಬ್ರುವರಿ 7ರಂದು ಜನಿಸಿದರು. ಶಾಲಾ ಉಪಾಧ್ಯಾಯರ ಮಗನಾದ ಜಿ.ಎಸ್.ಎಸ್ ಅವರು ಎಸ್.ಎಸ್.ಎಲ್.ಸಿ ಮುಗಿಯುತ್ತಿದ್ದಂತೆಯೇ ಬಡತನದ ಕಾರಣದಿಂದ ಸರಕಾರಿ ನೌಕರಿ ಹಿಡಿಯಬೇಕಾಯಿತು. ಗುಬ್ಬಿ ತಾಲ್ಲೂಕು ಕಚೇರಿಯಲ್ಲಿ ಗುಮಾಸ್ತರಾಗಿ ಸೇರಿದರು. ಆದರೆ ಓದಲೇಬೇಕೆಂಬ ಅದಮ್ಯ ಆಸೆಯಿಂದ ಕೆಲಸಕ್ಕೆ ವಿದಾಯ ಹೇಳಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದನ್ನು ಮುಂದುವರೆಸಿ ಬಿ.ಎ. ಪದವಿ (1949), ಸ್ವರ್ಣಪದಕದೊಂದಿಗೆ ...
READ MORE