ಆನಂದಕಂದ ಕಾವ್ಯನಾಮದಿಂದ ಪ್ರಸಿದ್ಧರಾದ ಬೆಟಗೇರಿ ಕೃಷ್ಣಶರ್ಮ ಅವರ ಕವಿತೆಗಳ ಸಂಗ್ರಹ ಇದು. ಶಬರಿಯ ಭಾಳು ಎಂಬ ಖಂಡಕಾವ್ಯವೂ ಸೇರಿ 23 ರಚನೆಗಳನ್ನು ಇದು ಒಳಗೊಂಡಿದೆ. ಹಾಡಲು ತಕ್ಕವುಗಳೆಂಬುದನ್ನೂ ಆನಂದಕಂದರು ಹೇಳಿದ್ದಾರೆ. ನವೋದಯ ಸಂದರ್ಭದ ಕಾವ್ಯದ ಘಮದೊಂದಿಗಿರುವ ಈ ಸಂಕಲನ ಒಂದು ಅಪರೂಪದ ಕೃತಿಯಾಗಿದೆ.
ಬೆಟಗೇರಿ ಕೃಷ್ಣಶರ್ಮರ ಕಾವ್ಯನಾಮ-ಆನಂದಕಂದ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ 1900ರ ಏಪ್ರಿಲ್ 16ರಂದು ಜನಿಸಿದರು. ತಂದೆ ಶ್ರೀನಿವಾಸರಾಯರು; ತಾಯಿ ರಾಧಾಬಾಯಿ.. ಕೃಷ್ಣಶರ್ಮರು 12ನೇ ವರ್ಷದವನಿರುವಾಗ ತಂದೆ, 15ನೇ ವರ್ಷಕ್ಕೆ ಅಣ್ಣ ಹಣಮಂತರಾಯ, 18ನೇ ವರ್ಷಕ್ಕೆ ತಾಯಿ ತೀರಿಕೊಂಡರು. ಸ್ವತಃ ಕೃಷ್ಣಶರ್ಮರೆ ತಮ್ಮ 14ನೇ ವಯಸ್ಸಿನಲ್ಲಿ ವಿಷಮಶೀತ ಜ್ವರ ಹಾಗೂ 15ನೇ ವಯಸ್ಸಿಗೆ ಪ್ಲೇಗ್ ನಿಂದ ಬಳಲಿ ಜೀವನುದ್ದಕ್ಕೂ ದುರ್ಬಲ ಕೈ-ಕಾಲುಗಳನ್ನು ಹೊಂದಬೇಕಾಯಿತು. 1928ರಲ್ಲಿ ತುಳಸೀಬಾಯಿಯೊಂದಿಗೆ ಮದುವೆ. ಕೃಷ್ಣಶರ್ಮರು 56 ವಯಸ್ಸಿನವರಿದ್ದಾಗ ಮಗಳು ಹಾಗೂ ಮರು ವರ್ಷವೇ ಪತ್ನಿ ತೀರಿ ಹೋದರು. 5ನೇ ತರಗತಿವರೆಗೆ ಬೆಟಗೇರಿಯಲ್ಲಿ ಪ್ರಾಥಮಿಕ ಶಿಕ್ಷಣ ನಂತರ, ಕಂಪಿಸುವ ಕೈ-ಕಾಲುಗಳೊಂದಿಗೆ 5 ...
READ MORE