ಎಂ.ಎಸ್.ಕೆ. ಪ್ರಭು
(15 July 1938 - 25 January 2000)
ಲೇಖಕ ಎಂ.ಎಸ್.ಕೆ. ಪ್ರಭು ಅವರು (ಮಂದಗೆರೆ ಸೀತಾರಾಮಯ್ಯ ಕೇಶವ ಪ್ರಭು) ಎಂದೇ ಪ್ರಸಿದ್ಧರು. ಮಂಡ್ಯ ಜಿಲ್ಲೆಯ ಕೃಷ್ಣರಾಜ ಪೇಟೆ ತಾಲ್ಲೂಕಿನ ಮಂದಗೆರೆ ಗ್ರಾಮದವರು. ತಂದೆ ಸೀತಾರಾಮಯ್ಯ, ತಾಯಿ ಸೀತಮ್ಮ. ಪ್ರಭು ಅವರ ಪ್ರಾಥಮಿಕ ಶಿಕ್ಷಣ ಮಂದಗೆರೆ ಹಾಗೂ ಹೊಳೆನರಸೀಪುರಗಳಲ್ಲಿ, ಪ್ರೌಢಶಿಕ್ಷಣವನ್ನು ಮೈಸೂರಿನಲ್ಲಿ ನಂತರ ಮೈಸೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಮೊದಲ ದರ್ಜೆಯಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಬೆಂಗಳೂರಿನ ಅಕೌಂಟೆಂಟ್ ಜನರಲ್‌ರವರ ಕಚೇರಿಯಲ್ಲಿ.(1961ರಿಂದ 1977) ಕಾರ್ಯನಿರ್ವಹಿಸಿ, ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಆಕಾಶವಾಣಿಯಲ್ಲಿ ಕಾರ್ಯಕ್ರಮ ನಿರ್ವಹಣಾ ಅಧಿಕಾರಿಗಳಾಗಿದ್ದು, ಭದ್ರಾವತಿ, ಧಾರವಾಡ, ಬೆಂಗಳೂರು ಕೇಂದ್ರಗಳಲ್ಲಿ ಸೇವೆ ಸಲ್ಲಿಸಿ, 1996ರಲ್ಲಿ ನಿವೃತ್ತರಾದರು. ಹಲವಾರು ಶಬ್ಧ ಚಿತ್ರಗಳನ್ನೂ ನಿರ್ಮಿಸಿದ್ದು ಅವುಗಳಲ್ಲಿ ಐನ್‌ಸ್ಟೀನ್‌ರ ‘ಸಂಸಾರಾಲಯ’ ಮತ್ತು ‘ಅವತಾರ’ ...
READ MORE