ವಿಶ್ವ ವಿಖ್ಯಾತ ವೈದ್ಯ ವಿಜ್ನಾನಿಗಳು-ಈ ಕೃತಿ ರಚಿಸಿದವರು. ಡಾ. ಎಚ್.ಡಿ. ಚಂದ್ರಪ್ಪಗೌಡ. ಯಾವುದೇ ಸಂಶೋಧನೆ ಮಾನವಕುಲದ ಒಳಿತಿಗೆ ಆಗಬೇಕು ಎಂಬ ಉದ್ದೇಶದೊಂದಿಗೆ ಶ್ರಮಿಸಿದ ಸುಮಾರು 30 ಮಹನೀಯರ ಸಾಧನೆಗಳನ್ನು ವಿವರಿಸಿದ ಕೃತಿ ಇದು. ಕೀರ್ತಿ, ಹಣ ಗಳಿಕೆ ಇವರ ಉದ್ದೇಶವಾಗಿರಲಿಲ್ಲ. ಇವರ ಸಂಶೋಧನೆ ಕೆಲವೊಮ್ಮೆ ಆಕಸ್ಮಿಕವಾಗಿತ್ತು. ಕೆಲವೊಮ್ಮೆ ದೀರ್ಘ ಪರಿಶ್ರಮದ ಫಲವಾಗಿತ್ತು. ಕೆಲವರಂತೂ ತಮ್ಮ ಸಂಶೋಧನೆಗೆ ತಾವೇ ಬಲಿಯಾದರು. ಇಂಥ ದುರಂತದ ಹರ್ಷದ ರೋಚಕ ಚಿತ್ರಣಗಳನ್ನು ಒಳಗೊಂಡ ಕೃತಿ ಇದು.
ಡಾ. ಚಂದ್ರಪ್ಪಗೌಡ ಎಚ್.ಡಿ ಅವರು 29-6- 1929 ಹೊಳೆಗದ್ದೆಯಲ್ಲಿ ಜನಿಸಿದರು. ವೃತ್ತಿಯಲ್ಲಿ ವೈದ್ಯಾಧಿಕಾರಿಯಾಗಿ ಸೇವೆಸಲ್ಲಿಸುತ್ತಿರುವ ಅವರು, ಪ್ರವೃತ್ತಿಯಲ್ಲಿ ಸಾಹಿತಿಯಾಗಿದ್ದಾರೆ. ವೈಜ್ಞಾನಿಕ ಸಾಹಿತ್ಯ ರಚನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಡಾ.ಎಚ್.ಡಿ. ಚಂದ್ರಪ್ಪಗೌಡ ಅವರು ಆರೋಗ್ಯದ ಕುರಿತಾಗಿ, ಮತ್ತು ಸೃಜನಶೀಲವಾಗಿ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಅವರ ಲೋಕದ ಕೌತುಕಗಳು, ಕುಸಿದುಬೀಳದಂತೆ ತಡೆಯುವುದು ಹೇಗೆ, ಕೃತಿಗಳಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ ಲಭಿಸಿದೆ. ಕುವೆಂಪು ವೈದ್ಯ ಸಾಹಿತ್ಯ ಪುರಸ್ಕಾರ, ದೇಜಗೌ ಪ್ರತಿಷ್ಠಾನದ ವಿಶ್ವಮಾನವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಎಚ್.ಡಿ.ಚಂದ್ರಪ್ಪಗೌಡ ಅವರ ಮುಖ್ಯ ಕೃತಿಗಳು : ಜೋಸೆಫ್ ಆಸ್ಟರ್, ವೈದ್ಯವಿಜ್ಞಾನ ಸಾಧಕರು, ವಿಶ್ವವಿಖ್ಯಾತ ವೈದ್ಯ ವಿಜ್ಞಾನಿಗಳು ...
READ MORE