ಸಾಹಿತಿ ಡಾ. ರಾಜಶೇಖರ ಮಠಪತಿ (ರಾಗಂ) ಅವರ ಕೃತಿ-ವಿಶ್ವಶ್ರೇಷ್ಠ ಮಹಿಳೆಯರ ಭಾಷಣಗಳು. ಭಾರತದ ಮಾಜಿ ಪ್ರಧಾನಿ ಇಂದಿರಾಗಾಂಧಿ, ನೊಬೆಲ್ ಪ್ರಶಸ್ತಿ ಪುರಸ್ಕೃತ ಮದರ್ ಥೆರಾಸಾ, ಸೇರಿದಂತೆ ವಿಶ್ವದ ಗೌರವಾನ್ವಿತ ಮಹಿಳೆಯರ ಬದುಕು ಹಾಗೂ ಅವರ ಸಾಧನೆಗಳನ್ನು ಪರಿಚಯಿಸುವ ಕೃತಿ ಇದು. ಅತ್ಯಂತ ಸರಳ ಭಾಷೆಯಲ್ಲಿ ವಿವರಿಸಿರುವ ಈ ಕೃತಿಯು ಮಕ್ಕಳಿಗೂ, ದೊಡ್ಡವರಿಗೂ ಉಪಯುಕ್ತವಾಗಿದೆ.
ಸಾಹಿತಿ, ಚಿಂತಕ, ಕನ್ನಡ ಸಾಹಿತ್ಯ ಆಕಾಡೆಮಿ ಸದಸ್ಯರಾದ ರಾಜಶೇಖರ ಮಠಪತಿ (ರಾಗಂ) ಅವರು ಹುಟ್ಟಿದ್ದು ಬೆಳಗಾಂವ ಜಿಲ್ಲೆಯ ತೆಲಸಂಗದಲ್ಲಿ. ಕರ್ನಾಟಕದ ಗಡಿಯ ಊರಾದ ಚಡಚಣದಲ್ಲಿ ಪ್ರಾಥಮಿಕದಿಂದ ಪದವಿಪೂರ್ವದ ಶಿಕ್ಷಣ, ನಂತರ ಬಿಜಾಪೂರ ಮತ್ತು ಸೊಲ್ಲಾಪುಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ, ಕ.ವಿ.ವಿ ಧಾರವಾಡದಿಂದ ಆಂಗ್ಲ ಸಾಹಿತಿ, ಸಿನಿಮಾ ನಿರ್ದೇಶಕ,ಪತ್ರಕರ್ತ, ಕೆ.ಎ.ಅಬ್ಬಾಸರನ್ನು ಕುರಿತು ಪಿ.ಹೆಚ್.ಡಿ - ಹೀಗೆ ಶೈಕ್ಷಣಿಕ ಬದುಕಿನ ಹಲವು ಹಂತಗಳನ್ನು ಗಳಿಸಿದ್ದಾರೆ. ಇದುವರೆಗೆ ಅವರು ಕನ್ನಡ, ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಬರೆದ ಕೃತಿಗಳ ಸಂಖ್ಯೆ ಅರವತ್ತು ಅಂಕಿಯನ್ನು ದಾಟುತ್ತದೆ. ಕಾವ್ಯ, ಕತೆ, ನಾಟಕ, ಪ್ರಬಂಧ, ಅಂಕಣ, ಸಂಶೋಧನೆ, ...
READ MORE