‘ವಿಶ್ವವಿಖ್ಯಾತ ವಿಜ್ಞಾನಿಗಳು- ಜೀವನ ಸಾಧನೆ’ ನವಕರ್ನಾಟಕದ ಲೋಕಜ್ಞಾನ ಮಾಲೆಯಲ್ಲಿ ಪ್ರಕಟವಾದ ಮಹತ್ವದ ಕೃತಿ. ಹಿರಿಯ ಲೇಖಕ ಬಳೂರಗಿ ಡಿ.ಆರ್ ಅವರು ರಚಿಸಿದ್ದಾರೆ. ವಿಶ್ವವಿಖ್ಯಾತ ವಿಜ್ಞಾನಿಗಳ ಜೀವನ ಮತ್ತು ವಿಜ್ಞಾನ ಕ್ಷೇತ್ರದಲ್ಲಿಯ ಅವರ ಮಹತ್ವದ ಸಾಧನೆಗಳ ಕುರಿತಾದ ಮಾಹಿತಿಗಳಿವೆ. ವಿಜ್ಞಾನದ ವಿದ್ಯಾರ್ಥಿಗಳಿಗೆ, ವಿಜ್ಞಾನಾಸಕ್ತರಿಗೆ ಇದೊಂದು ಉತ್ತಮ ಕೃತಿ ಎನ್ನಬಹುದು.
"ಸುಗ್ಗಿಯು ಬಂದಿತು ಹಿಗ್ಗನು ತಂದಿತು ನಮ್ಮಯ ನಾಡಿನ ಜನಕೆಲ್ಲ" ಶಾಲಾ ಮಟ್ಟದ ಕನ್ನಡ ಪುಸ್ತಕದಲ್ಲಿ ಪದ್ಯವಾಗಿದ್ದ ಈ ಸುಗ್ಗಿ ಹಾಡನ್ನು ಕೇಳದವರಿಲ್ಲ. ಈ ಪದ್ಯದ ಕತೃ ದ.ರಾ ಬಳೂರಗಿ (ಡಿ.ಆರ್. ಬಳೂರಗಿ). ಬಳೂರಗಿಯವರು ಹನ್ನೊಂದು ವರ್ಷದ ಬಾಲಕನಾಗಿದ್ದ (1954) ಸಮಯದಲ್ಲಿ ಬರೆದ ಹಾಡಿದು. ಮೂಲತಃ ವಿಜಯಪುರ ಜಿಲ್ಲೆ ಸಾರವಾಡದವರಾದ ಬಳೂರಗಿ ಅವರು ಜನಿಸಿದ್ದು 1943 ಜುಲೈ 20ರಂದು. ಹುಟ್ಟೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ವಿಜಯಪುರದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು ಅಧ್ಯಾಪಕರಾಗಿ ವೃತ್ತಿ ಆರಂಭಿಸಿದರು. ...
READ MORE