ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ ಅವರ ಲೇಖನಗಳು ಹಾಗೂ ಮುನ್ನುಡಿಗಳ ಕಟ್ಟು’ವಿವೇಕ ಕಥನ’. 66ನೇ ಕನ್ನಡ ರಾಜ್ಯೋತ್ಸವದ ವೇಳೆಯಲ್ಲಿ ಸಪ್ನ ಬುಕ್ ಹೌಸ್ ಪ್ರಕಾಶನದ ಮೂಲಕ ತೆರೆ ಕಂಡ ಕೃತಿಯಿದೆ. ಈ ಕೃತಿಗೆ ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಬೆನ್ನುಡಿಯ ಮಾತುಗಳನ್ನು ಬರೆದಿದ್ದಾರೆ.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಮೊದಲ ಕುಲಪತಿಗಳಾಗಿದ್ದ ಮಲ್ಲೇಪುರಂ ಜಿ. ವೆಂಕಟೇಶ ಅವರು 1952, ಜೂನ್ 5ರಂದು ಬೆಂಗಳೂರು ಜಿಲ್ಲೆಯ ನೆಲಮಂಗಲದಲ್ಲಿ ಜನಿಸಿದರು. ತಂದೆ ಗಂಗಯ್ಯ, ತಾಯಿ ವೆಂಕಟಮ್ಮ. ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾಭ್ಯಾಸ ನೆಲಮಂಗಲದ ಸರ್ಕಾರಿ ಮತ್ತು ಹೈಯರ್‌ಸೆಕೆಂಡರಿ ಶಾಲೆ. ಮೊದಲ ಸಂಸ್ಕೃತ-ಕನ್ನಡ ಗುರುಗಳು ಎಸ್.ವಿ. ರಾಮಸ್ವಾಮಿ ಅಯ್ಯಂಗಾರ್. ಸಿದ್ಧಗಂಗಾ ಮಠದಲ್ಲಿ ಕನ್ನಡ ಪಂಡಿತ್ ಮತ್ತು ಸಂಸ್ಕೃತ ಅಲಂಕಾರವಿದ್ವತ್ ವ್ಯಾಸಂಗ. ವಿದ್ವಾನ್ ಬಿ. ವೆಂಕಟರಾಮಭಟ್ಟ, ಇವರಲ್ಲಿ ಕಾವ್ಯಾಲಂಕಾರಗಳ ಅಧ್ಯಯನ. ಬೆಂಗಳೂರಿನ ಶ್ರೀರಾಮಕೃಷ್ಣಾಶ್ರಮದಲ್ಲಿ ಸ್ವಾಮಿ ಆದಿದೇವಾನಂದರಿAದ ಅದ್ವೈತ ವೇದಾಂತದ ಅನುಗ್ರಹ. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ., ಮೂರನೇ ರ‍್ಯಾಂಕಿನೊಡನೆ ಕುವೆಂಪು ಚಿನ್ನದ ...
READ MORE