ಡಾ. ಪಿ.ಎಸ್. ಶಂಕರ ಅವರ ಕೃತಿ-ವೃದ್ಧಾಪ್ಯದಲ್ಲಿನ ಕಾಯಿಲೆಗಳು. ವೃದ್ಧಾಪ್ಯದಲ್ಲಿಯ ಹತ್ತು ಹಲವು. ರೋಗಗಳಿಗೆ ಸ್ವಲ್ಪ ಕಾರಣ ಸಾಕು.ಏಕೆಂದರೆ ರೋಗವನ್ನು ತಡೆಗಟ್ಟುವ ಶಕ್ತಿ ಅವರಿಗೆ ಇರುವುದಿಲ್ಲ. ರೋಗ ನಿರೋಧಕ ಶಕ್ತಿ ಇಲ್ಲದ್ದರಿಂದ ಅವರು ಬಹು ಬೇಗನೇ ರೋಗಗಳಿಗೆ ತುತ್ತಾಗುತ್ತಾರೆ. ರೋಗಗಳು ದೈಹಿಕ ಇಲ್ಲವೇ ಮಾನಸಿಕವೂ ಆಗಿರಬಹುದು. ಈ ಕುರಿತು ಲೇಖಕರು ಸವಿವರ ಮಾಹಿತಿ ನೀಡಿದ್ದಾರೆ.
ವೃತ್ತಿಯಲ್ಲಿ ವೈದ್ಯರಾಗಿ ವೈದ್ಯ ಸಾಹಿತಿಯಾಗಿ ಪ್ರಸಿದ್ಧರಾಗಿರುವ ಡಾ.ಪಿ.ಎಸ್.ಶಂಕರ್ ಅವರು 1936 ಜನವರಿ 1ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹಲಗೇರಿಯಲ್ಲಿ ಜನಿಸಿದರು. ಹುಟ್ಟೂರು ಹಾಗೂ ಚಿತ್ರದುರ್ಗದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಮೈಸೂರು ಮತ್ತು ದೆಹಲಿಯಲ್ಲಿ ವೈದ್ಯಕೀಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಲಬುರ್ಗಿಯ ಎಂ.ಆರ್. ಮೆಡಿಕಲ್ ಕಾಲೇಜಿನಲ್ಲಿ ಅಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ. ವೃದ್ಧಾಪ್ಯದಲ್ಲಿನ ಕಾಯಿಲೆಗಳು, ಹೃದಯ ಜೋಪಾನ, ಕ್ಯಾನ್ಸರ್, ಹೃದಯ ರೋಗ ತಡೆಗಟ್ಟಿ, ಡಾ. ವಿಕ್ರಂ ಸಾರಾಭಾಯ್, ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಸೋವಿಯತ್ ಲ್ಯಾಂಡ್ ನೆಹರು ಪ್ರಶಸ್ತಿ, ರಾಕ್ ಫೆಲ್ಲರ್ ಸ್ಕಾಲರ್ ಇನ್ ರೆಸಿಡೆನ್ಸ ಗೌರವ, ಭಾರತ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ...
READ MORE