ಖ್ಯಾತ ಲೇಖಕ-ಪ್ರಬಂಧಕಾರ ಡಾ. ವ್ಯಾಸರಾಯ ಬಲ್ಲಾಳ ಅವರ ಕೃತಿ ಇದು. ಅವರು ಬರೆದ ಕಥೆಗಳ ಪೈಕಿ ಆಯ್ದ ಕಥೆಗಳನ್ನು ಸಂಕಲಿಸಲಾಗಿದೆ. ಪ್ರತಿ ಕಥೆಯು ವಸ್ತು ವೈವಿಧ್ಯತೆ, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಭಾಷೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಕಥೆಗಳು ಓದುಗರ ಗಮನ ಸೆಳೆಯುತ್ತವೆ.
ಆರು ದಶಕಗಳ ಕಾಲ ಸಣ್ಣಕತೆಯ ಪ್ರಕಾರದಲ್ಲಿ ನಿರಂತರವಾಗಿ ತಮ್ಮ ಸೃಜನಶೀಲ ಪ್ರತಿಭೆಯನ್ನು ತೊಡಗಿಸಿಕೊಂಡು ಬಂದಿರುವ ಬಲ್ಲಾಳರು ವಸ್ತುವೈವಿಧ್ಯದಲ್ಲಿ, ಅಭಿವ್ಯಕ್ತ ವಿಧಾನದಲ್ಲಿ ಕನ್ನಡ ಕತಾ ಸಾಹಿತ್ಯಕ್ಕೆ ಸಮೃದ್ಧ ಕೊಡುಗೆ ನೀಡಿದ್ದಾರೆ. ಪ್ರಗತಿಶೀಲ ಚಳುವಳಿಯಿರಬಹುದು, ನವೋದಯ ಸಂಪ್ರದಾಯದ ರೀತಿಯಿರಬಹುದು, ನವ್ಯ ಪ್ರಜ್ಞೆಯ ಪ್ರಭಾವವಿರಬಹುದು- ಈ ಎಲ್ಲವನ್ನೂ ತಮ್ಮ ಸೃಜನಶೀಲ ಪಯಣದಲ್ಲಿ ಬಲ್ಲಾಳರು ಮುಖಾಮುಖಿಯಾಗಿದ್ದಾರೆ. ಆದರೆ ಯಾವ ಪಂಥದ ಜೊತೆಗೂ ತಮ್ಮನ್ನು ಅವರು ಸಮೀಕರಿಸಿಕೊಳ್ಳದೆ ಅನನ್ಯವೆಂಬಂತೆ ಬರೆಯುತ್ತಾ ಬಂದಿದ್ದಾರೆ. ಅವರು 1923 ಡಿಸೆಂಬರ್ 01ರಂದು ಉಡುಪಿಯಲ್ಲಿ ಜನಿಸಿದರು. ತಂದೆ ರಾಮದಾಸ, ತಾಯಿ ಕಲ್ಯಾಣಿ. ಮುಂಬಯಿ ಮಹಾನಗರದಲ್ಲಿ ಉದ್ಯೋಗವನ್ನರಿಸದ ಅವರು ವಿದೇಶಿ ತೈಲ ಕಂಪನಿ ಒಂದರಲ್ಲಿ ಶೀಘ್ರಲಿಪಿಕಾರರಾಗಿ ...
READ MORE