‘ಯಾಕೆ ಕಾಡುತಿದೆ ಸುಮ್ಮನೆ ನನ್ನನು’ ಲೇಖಕಿ ಎನ್. ಸಂಧ್ಯಾರಾಣಿ ಅವರ ಲೇಖನ ಸಂಕಲನ.ಅವರ ಅಂಕಣಬರಹಗಳ ಸಂಕಲನವಾಗಿರುವ ಈ ಕೃತಿಯಲ್ಲಿ ಅನೇಕ ವಿಚಾರಗಳಿಗೆ ಮಾರ್ದವತೆ ನೀಡಿ ನಿರೂಪಿಸಿದ್ದಾರೆ. ಈ ಕೃತಿ ಮಾನವೀಯ ಸಂಬಂಧಗಳನ್ನು ಹುಡುಕುತ್ತಿರುವ ಹೆಣ್ಣೊಬ್ಬಳ ಒಳದನಿ ಎನ್ನಬಹುದು. ಯಾವುದೇ ಚೌಕಟ್ಟುಗಳನ್ನು ಹಾಕಿಕೊಳ್ಳದೆ ತಮ್ಮೊಳಗಿನ ಮಾತುಗಳನ್ನು ಸಂಧ್ಯಾರಾಣಿ ಅವರು ಇಲ್ಲಿ ದಾಖಲಿಸಿದ್ದಾರೆ.
ಪತ್ರಕರ್ತೆ, ಲೇಖಕಿ, ಸಿನಿಮಾ ವಿಮರ್ಶಕಿ ಸಂಧ್ಯಾರಾಣಿ ಅವರು ಕೋಲಾರ ಜಿಲ್ಲೆಯ ಬಂಗಾರಪೇಟೆಯವರು. ಚಿನ್ನದ ಗಣಿ ಕೆ.ಜೆ.ಎಫ್‌ನಲ್ಲಿ ಪದವಿ ಶಿಕ್ಷಣ ಪಡೆದಿರುವ ಇವರು ಪ್ರಸ್ತುತ ಹವ್ಯಾಸಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ಕೆಲವು ಇ-ಪತ್ರಿಕೆಗಳ ಅಂಕಣಕಾರ್ತಿಯಾಗಿರುವ ಇವರು ಬರೆದಿರುವ ಪ್ರಮುಖ ಕೃತಿಗಳೆಂದರೆ ಯಾಕೆ ಕಾಡುತಿದೆ ಸುಮ್ಮನೆ(ಅಂಕಣ ಬರಹಗಳು), ತುಂಬೆ ಹೂ (ಜೀವನ ಚರಿತ್ರೆ), ಪೂರ್ವಿ ಕಲ್ಯಾಣಿ (ನಾಟಕ) ಮುಂತಾದವು. ರಾಷ್ಟ್ರ ಪ್ರಶಸ್ತಿ ವಿಜೇತ ನಾತೀಚರಾಮಿ ಸಿನಿಮಾಕ್ಕೆ ಚಿತ್ರಕತೆ ಬರೆದಿದ್ದರು. ...
READ MORE