ಯಾವ ಕಷ್ಟವೂ ಶಾಶ್ವತವಲ್ಲ!

Author : ಡಿ.ವಿ. ಗುರುಪ್ರಸಾದ್

Pages 136

₹ 130.00




Year of Publication: 2020
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪೀಕರ್ ಬೀದಿ, ಹುಬ್ಬಳ್ಳಿ- 580020
Phone: 9448110034

Synopsys

ಲೇಖಕ ಡಿ.ವಿ. ಗುರುಪ್ರಸಾದ್ ಅವರ ನೀವು ಒಮ್ಮೆ ಫೇಲ್ ಆಗಲೇಬೇಕು ಸರಣಿಯ ಮೂರನೇ ಕೃತಿ ‘ಯಾವ ಕ್ಷಣವೂ ಶಾಶ್ವತವಲ್ಲ’. ಈ ಕೃತಿಯಲ್ಲಿ ಸ್ಫೂರ್ತಿದಾಯಕ ವ್ಯಕ್ತಿಗಳ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ದಾಖಲಿಸಲಾಗಿದೆ. ತಮಗೆ ಯಾವುದೇ ರೀತಿಯ ತೊಂದರೆ ಬಂದರೂ, ಧೃತಿಗೆಡದೆ ತಮ್ಮ ಕಷ್ಟನಷ್ಟಗಳನ್ನು, ತಮಗೆದುರಾದ ಸವಾಲುಗಳನ್ನು ಸ್ವೀಕರಿಸಿ ಎದುರಿಸಿ ಜೀವನದಲ್ಲಿ ಮುಂದೆ ಬರುವ ಛಲವನ್ನು ತೋರಿಸಿರುವ ಹಲವಾರು ಯುವಕ ಯುವತಿಯರ ನಿದರ್ಶನಗಳನ್ನು ಈ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ.

ಈ ಪುಸ್ತಕದ ಮುಖ್ಯ ಉದ್ದೇಶವೇ ಈ ಸ್ಫೂರ್ತಿದಾಯಕ ಕಥೆಗಳನ್ನು ಓದಿದವರು ತಮ್ಮ ಜೀವನದಲ್ಲಿ ಆ ಗುಣಗಳನ್ನು ಅಳವಡಿಸಿಕೊಂಡು ತಾವೂ ಮುಂದೆ ಬರುತ್ತಾರೆ ಎನ್ನುವುದಾಗಿದೆ ಎನ್ನುತ್ತಾರೆ ಲೇಖಕ ಡಿ.ವಿ. ಗುರುಪ್ರಸಾದ್.

About the Author

ಡಿ.ವಿ. ಗುರುಪ್ರಸಾದ್

ಲೇಖಕ ಡಿ.ವಿ. ಗುರುಪ್ರಸಾದ್ ಅವರು ನಿವೃತ್ತ ಪೊಲೀಸ್ ಅಧಿಕಾರಿಗಳಾಗಿದ್ದು, ರಾಜ್ಯದ ಪೊಲೀಸ್ ಗುಪ್ತಚರದಳ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ತಮ್ಮ ವೃತ್ತಿ ಬದುಕಿನ ಅನುಭವ ಮತ್ತು ತಮ್ಮ ವಿಚಾರಗಳನ್ನು ಕೃತಿಗಳ ಮೂಲಕ ದಾಖಲಿಸುವ ಇವರು ಕ್ರೈಂ ಲೋಕದ ವಿಸ್ಮಯ, ವಿಚಿತ್ರ ಸಂಗತಿಗಳನ್ನು ಓದುಗರಮುಂದಿಡುತ್ತಾ ಬಂದಿದ್ದಾರೆ.  ‘ಪೊಲೀಸ್ ಜೀವನದಲ್ಲಿ ಹಾಸ್ಯ', 'ವೀರಪ್ಪನ್ : ದಂತಚೋರನ ಬೆನ್ನಟ್ಟಿ', 'ಕೈಗೆ ಬಂದ ತುತ್ತು’, ‘ಪೊಲೀಸ್ ಎನ್ ಕೌಂಟರ್’, 'ಕ್ರೈಂ ಕಥೆಗಳು', 'ನೀವು ಒಮ್ಮೆ ಫೇಲ್ ಆಗಲೇಬೇಕು', 'ಅಪರಾಧಗಳ ಆ ಕ್ಷಣ', 'ವಿಶ್ವಪರ್ಯಟನೆ', 'ರಾಜೀವ್ ಗಾಂಧಿ ಭೀಕರ ಹತ್ಯೆ', 'ವೈವಿಧ್ಯತೆಯಲ್ಲಿ ಸಾಮ್ಯತೆ -ಯುರೋಪಿನ ಹದಿನಾಲ್ಕು ದೇಶಗಳು', 'ಗಲ್ಲುಗಂಬದ ...

READ MORE

Related Books