ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಸಂಪಾದಿಸಿದ ಕೃತಿ-ವೈಯೆನ್ಕೆ ಅವರ ಬೆಸ್ಟ್ ಆಫ್ ವಂಡರ್‍ಸ್. ವೈ.ಎನ್.ಕೆ. ಅವರು ಹಿರಿಯ ಪತ್ರಕರ್ತರು ಹಾಗೂ ಅಂಕಣಕಾರರು. ಚುಟುಕು ಪದಗಳ ಮೂಲಕ ಹಿರಿದಾದ ಅರ್ಥ ತುಂಬಿ, ಓದುಗರಿಗೆ ಶಬ್ಧಚಾತುರ್ಯ, ಕುತೂಹಲವನ್ನು ಕೆರಳಿಸುವವರು. ಅವರು ಬರೆದ ಚುಟುಕುಗಳು ಸಾಹಿತ್ಯ ವಲಯದಲ್ಲಿ ಗಮನ ಸೆಳೆದಿವೆ. ಅಂತಹ ಚುಟುಕು ಸಾಹಿತ್ಯವನ್ನು ಈ ಕೃತಿಯು ಸಂಪಾದಿಸಿದೆ.
ವಿಶ್ವೇಶ್ವರ ಭಟ್ ಅವರು ಉತ್ತರಕನ್ನಡ ಜಿಲ್ಲೆಯ ಕುಮಟಾದ ಮೂರೂರಿನವರು. ಓದಿದ್ದು ಎಂ.ಎಸ್ಸಿ. ಹಾಗೂ ಎಂ.ಎ. ನಾಲ್ಕು ಚಿನ್ನದ ಪದಕ ವಿಜೇತರು, ಇಂಗ್ಲೆಂಡಿನಲ್ಲಿ ಪತ್ರಿಕೋದ್ಯಮದಲ್ಲಿ ಉನ್ನತ ವ್ಯಾಸಂಗ, ಸಂಯುಕ್ತ ಕರ್ನಾಟಕ, ಕನ್ನಡಪ್ರಭದಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಚಾನಲ್‌ನ ಪ್ರಧಾನ ಸಂಪಾದಕ, ಏಷಿಯನ್ ಕಾಲೇಜ್ ಆಫ್ ಜರ್ನಲಿಸಮ್‌ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್, ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಸದ್ಯ, “ವಿಶ್ವವಾಣಿ' ದಿನಪತ್ರಿಕೆಯ ಪ್ರಧಾನ ಸಂಪಾದಕರು. 'ನೂರೆಂಟು ವಿಶ್ವ, 'ಇದೇ ಅಂತರಂಗ ಸುದ್ದಿ' ...
READ MORE