ಲೇಖಕ ಸಿ.ಎಚ್. ರಾಜಶೇಖರ ಅವರ ಕೃತಿ-ಯುದ್ಧ ಮತ್ತು ಪ್ರಜ್ನೆ. 25 ಬಿಡಿ ಸಂಪುಟಗಳ ಸಮಗ್ರ ಬುದ್ಧ ಸಾಹಿತ್ಯ ಮಾಲೆಯಡಿ ಪ್ರಕಟಿತ ಕೃತಿ. ಜಾತಕ ಕಥೆಗಳನ್ನು ಧರ್ಮಗ್ರಂಥವೆಂದು ಅಂಗೀಕರಿಸಿದೆ. ಕಥೆಗಳ ಉದ್ದೇಶ, ಗುರಿ, ಮತ್ತು ಭರವಸೆ ಎಂದರೆ ಬದುಕಿನ ಉನ್ನತಿ, ಶ್ರೇಷ್ಠತೆ, ಯಶಸ್ಸು, ಪರಿಪೂರ್ಣತೆ ಹಾಗೂ ಸಂಕೋಲೆಗಳಿಂದ ವಿಮುಕ್ತಿಯೇ ಆಗಿದೆ. ಇದು ಬುದ್ಧನ ಜೀವನದ ಕತೆಯನ್ನು ಪ್ರತಿಬಿಂಬಿಸುವ ಬೃಹತ್ ಜ್ಞಾನಕೋಶ “ಸ್ವರ್ಣ ಖಜಾನೆ“ ಯಾಗಿದೆ. ಬುದ್ಧನ ಚಿಂತನೆಗಳ ಹಿನ್ನೆಲೆಯಲ್ಲಿ ಯುದ್ಧ ಹಾಗೂ ಪ್ರಜ್ನೆ ಈ ಎರಡು ಪರಿಕಲ್ಪನೆಗಳನ್ನು ವಿಶ್ಲೇಷಿಸಲಾಗಿದೆ. ಇಲ್ಲಿ ಪ್ರಜ್ಞೆ ಇದ್ದಲ್ಲಿ ಹೇಗೆ ಮನುಷ್ಯನು ಎಂಥಹ ಕಠಿಣ ಪರಿಸ್ಥಿತಿಯನ್ನೂ ಕೂಡ ಅಹಿಂಸೆಯಿಂದ ಗೆಲ್ಲಬಹುದು ಎಂಬುದನ್ನು ಎಳೆಎಳೆಯಾಗಿ ಬಿಚ್ಚಿ ತೋರಿಸುತ್ತದೆ. ಪ್ರಜ್ಞೆಯಿಂದಲೇ ಅಹಿಂಸೆ ಮತ್ತು ಮೌಢ್ಯದಿಂದಲೇ ಹಿಂಸೆ ಎಂಬುದನ್ನು ದೃಢಪಡಿಸುತ್ತದೆ ಎಂಬುದನ್ನು ಇಲ್ಲಿ ವಿವರಿಸುತ್ತಾರೆ.
ಲೇಖಕ ಸಿ.ಎಚ್. ರಾಜಶೇಖರ್ ಅವರು ಸಮಗ್ರ ಬುದ್ಧ ಸಾಹಿತ್ಯ ಮಾಲೆ ಬಿಡಿ ಸಂಪುಟಗಳನ್ನು ರಚಿಸಿದ್ದಾರೆ. 'ಬುದ್ಧ ತನ್ನ ತಾ ಗೆದ್ದವನೇ ಸಂಗ್ರಾಮ ವಿಜೇತನೆಂದ', 'ಬುದ್ಧ ಜ್ಞಾನದ ಔಷಧಕ್ಕೆ ಸಂಭಾವನೆ ಇಲ್ಲೆಂದ', 'ಬುದ್ಧ ನಿನ್ನ ಅಂತರಂಗದ ಧ್ವನಿಯೇ ಭಾಗ್ಯವೆಂದ', 'ಬುದ್ಧ ಹೀಗೆ ಬದುಕಿ ಮೃತ್ಯುವನ್ನು ಜಯಿಸಿರೆಂದ', 'ಸಿದ್ಧಾರ್ಥ ಗೌತಮ ಬುದ್ಧನಾದ ಪರಿ', 'ಬುದ್ಧ ನಂದನ ಬೀಳ್ಕೊಟ್ಟ ಕಾಮ ತೊರೆಸಿ ಕಲ್ಯಾಣದತ್ತ', 'ಬುದ್ಧ ಮೋಹ ನಿರ್ಮೋಹಗಳ', 'ಬುದ್ಧ ನೀ ಅಲ್ಲೇ ನಿಲ್ಲೆಂದ ಅಂಗುಲೀಮಾಲಾ', 'ಬುದ್ಧನ ಸಂಧಿಸಿದ ಅಮ್ರಪಾಲಿ ಗಂಗೆಯಂತಾದಳು', 'ಬುದ್ಧ ಸಾಸಿವೆಕಾಳಲ್ಲಿ ಸಾಸಿರ ಕಥೆ ಸಾರಿದ ಕಿಸಾಗೋತಮಿಗೆ', 'ಹೆಣ್ಣು ಎಂದರೆ ...
READ MORE