ಕತೆಗಾರ ವಸುಧೇಂದ್ರ ಅವರ ಸಣ್ಣಕತೆಗಳ ಸಂಗ್ರಹ ’ಯುಗಾದಿ’. `ಯುಗಾದಿ’ ಕತೆಯಲ್ಲಿ ಹೊಸ ತಲೆಮಾರಿನ ಜೀವನ ಕ್ರಮವೊಂದನ್ನು ಹಳೆಯ ತಲೆಮಾರಿನ ಕಣ್ಣುಗಳಿಂದ ಕಾಣುವ ಪ್ರಯತ್ನವನ್ನು ಲೇಖಕರು ಓದುಗರಿಗೆ ನೀಡಿದ್ದಾರೆ. ತಾವು ಬದುಕಿ ಬಂದ ರೀತಿಗೆ ತಮ್ಮ ಮಗ ಬದುಕುತ್ತಿರುವ ರೀತಿಯನ್ನು ಹೋಲಿಸುತ್ತಾ ಅದನ್ನು ತಮ್ಮ ಗ್ರಹಿಕೆಗೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವ ಗೋಪಣ್ಣ ಮಾಸ್ತರರಿಗೆ ಆಗುವ ಗಲಿಬಿಲಿಗಳು ಈ ಕತೆಯಲ್ಲಿ ಪ್ರಮುಖವಾಗುತ್ತದೆ.
ಈ ಕೃತಿಗೆ ವರ್ಧಮಾನ ಉದಯೋನ್ಮುಖ ಪ್ರಶಸ್ತಿ ಲಭಿಸಿದೆ.
ವಸುಧೇಂದ್ರ ಅವರು ಕನ್ನಡದ ಪ್ರಸಿದ್ಧ ಬರಹಗಾರರು ಹಾಗೂ ಪುಸ್ತಕ ಪ್ರಕಾಶಕರು. ಮುಖ್ಯವಾಗಿ ಕತೆ, ಕಾದಂಬರಿ, ಲಲಿತ ಪ್ರಬಂಧಗಳು ಇವರ ಬರವಣಿಗೆಯ ಪ್ರಕಾರಗಳು. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 1969ರಲ್ಲಿ ಜನಿಸಿದ ವಸುಧೇಂದ್ರ ಅಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಆನಂತರ ಸುರತ್ಕಲ್ ನಿಂದ ಇಂಜಿನಿಯರಿಂಗ್ ಪದವಿ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಯ್ ನಿಂದ ಎಂ.ಇ. ಪದವಿ ಪಡೆದಿದ್ದಾರೆ. ಸುಮಾರು 20 ವರ್ಷಗಳ ಕಾಲ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಅವರು ಸದ್ಯ ಬೆಂಗಳೂರಿನಲ್ಲಿ ವಾಸವಿದ್ದು, ಸದ್ಯಕ್ಕೆ ಸಾಹಿತ್ಯಿಕ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮನೀಷೆ, ಯುಗಾದಿ, ಚೇಳು, ಹಂಪಿ ಎಕ್ಸ್ ...
READ MOREವರ್ಧಮಾನ ಉದಯೋನ್ಮುಖ ಪ್ರಶಸ್ತಿ ಲಭಿಸಿದೆ