‘ಯುವ-ಕಥೆ’ ಲೇಖಕ ಯತಿರಾಜ್ ವೀರಾಂಬುಧಿ ಅವರ ಲೇಖನಗಳ ಸಂಕಲನ. ಕನ್ನಡದ ಜನಪ್ರಿಯ ಕಾದಂಬರಿಕಾರರಲ್ಲಿ ಒಬ್ಬರು ಯತಿರಾಜ್ ವೀರಾಂಬುಧಿ. ಸುಮಾರು ಮೂರು ದಶಕಗಳಿಂದ ಕನ್ನಡದಲ್ಲಿ ಕತೆ, ಕಾದಂಬರಿ ಮತ್ತು ಅನುವಾದಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಯುವ ಕಥೆ ಕೃತಿ ಅವರ ವ್ಯಕ್ತಿತ್ವ ವಿಕಸನ ಲೇಖನಗಳ ಸಂಕಲನವಾಗಿದ್ದು, ವಿಭಿನ್ನ ರೀತಿಯ ನಿರೂಪಣೆಯಿಂದ ಓದುಗರನ್ನು ಸೆಳೆಯುವ ಕೃತಿಯಾಗಿದೆ.
ಕಥೆಗಾರ,ಲೇಖಕ, ಅನುವಾದಕ, ಕಾದಂಬರಿಗಾರರಾದ ಯತಿರಾಜ್ ವೀರಾಂಬುಧಿ 11-08-1957ರಂದು ಮೈಸೂರಿನಲ್ಲಿ ಜನಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ ಅವರು ಮೈಸೂರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್‌ನಲ್ಲಿ ಬಿ.ಇ (ಎಲೆಕ್ಟ್ರಿಕಲ್ ಪವರ್) ಮುಗಿಸಿದರು. ಬೆಂಗಳೂರು ಮತ್ತು ಸಲ್ತನತ್ ಆಫ್ ಒಮಾನ್‌ನಲ್ಲಿ ಕಾರ್ಯ ನಿರ್ವಹಿಸಿ 2013ರಲ್ಲಿ ನಿವೃತ್ತಿ ಪಡೆದಿದ್ದಾರೆ. ಯತಿರಾಜ್ ವೀರಾಂಬುಧಿಯವರ ಪ್ರಕಟಿತ ಕೃತಿಗಳು- ಆಪತ್ತಿಗೆ ಆಹ್ವಾನ, ಪರಿಶೋಧ, ಗಾಥೆ, ಮರದಡಿ ಮಳೆ, ಪಂಚಾನನ, ಜೀವನ್ಮುಖಿ, ಸಾಬೀತು, ಕುರುಡು ತಿರುವು, ಅವಿನಾಭಾವ, ಹಸ್ತಕ್ಷೇಪ, ಹಾಸುಹೊಕ್ಕು, ಕಪ್ಪು ನದಿ, ಉದ್ಯೋಗ ಪರ್ವ, ಕರೆದರೆ ಬಾರೆ..!, ಒಂದೊಂದಾಗಿ ಜಾರಿದರೆ, ರಣವೀಳ್ಯ, ಚಿರಸ್ಮಿತ, ಸುಖಿಯಾಗಿರು ...
READ MORE