
ಧನ್ಯಶ್ರೀ ಭಟ್‌ಗೆ ಎನ್ನೆಸ್ಸೆಸ್ ರಾಜ್ಯ ಪ್ರಶಸ್ತಿ ಪ್ರದಾನ
Mangaluru: ನಗರದ ಯೆನೆಪೋಯ ಇನ್‌ಸ್ಟಿಟ್ಯೂಟ್‌ನ ಹಳೆ ವಿದ್ಯಾರ್ಥಿ, ಪ್ರಸ್ತುತ ನಗರದ ಎಸ್‌ಡಿಎಂ ಕಾನೂನು ಕಾಲೇಜಿನ ವಿದ್ಯಾರ್ಥಿನಿ ವಿದುಷಿ ಧನ್ಯಶ್ರೀ ಡಿ. ಭಟ್ ಅವರಿಗೆ ಎನ್‌ಎಸ್‌ಎಸ್ ರಾಜ್ಯ ಪ್ರಶಸ್ತಿ ಲಭಿಸಿದೆ.
ರಾಜ್ಯ ಸರಕಾರ ರಾಜ್ಯ ಎನ್‌ಎಸ್‌ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಬೆಂಗಳೂರಿನ ರಾಜಭವನದಲ್ಲಿ ಆಯೋಜಿಸಿದ್ದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ 2022-23 ನೇ ಸಾಲಿನ ಎನ್‌ಎಸ್‌ಎಸ್ ಅತ್ಯುತ್ತಮ ಸ್ವಯಂಸೇವಕಿ ರಾಜ್ಯ ಪ್ರಶಸ್ತಿ ಪ್ರದಾನ ಮಾಡಿದರು.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಮತ್ತು ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶಕರಾದ ಕಾರ್ತಿಕೇಯನ್ ಡಿ., ಯುವ ಅಧಿಕಾರಿ ಸಂತೋಷ್ ಉಪಸ್ಥಿತರಿದ್ದರು.
ಸದಸ್ಯ ಡಾ.ಕೆ. ಗೋವಿಂದರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರಕಾರದ ಕಾರ್ಯದರ್ಶಿ ರಣದೀಪ್ ಡಿ., ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಚೇತನ್ ಆರ್., ರಾಜ್ಯ ಎನ್‌ಎಸ್‌ಎಸ್ ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ ಧನ್ಯಶ್ರೀ ಡಿ. ಭಟ್ ಅವರು ದೀಪಕ್ ಭಟ್ ಹೊಸಬೆಟ್ಟು ಮತ್ತು ಉಮಾ ದಂಪತಿ ಪುತ್ರಿ. ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನದ ಅಂಗವಾಗಿ ಒಂದು ದಿನ ಯುವ ಕ್ರೀಡಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.