ಲೇಖಕ ಜೋಗಿ (ಗಿರೀಶ್ ರಾವ್ ಹತ್ವಾರ್) ಅವರ ಸುಮಾರು 4 ದಶಕದ ಕತೆಗಳನ್ನು ಒಂದೆಡೆ ಸೇರಿಸಿ ಓದುಗರಿಗೆ ನೀಡಿದ್ದೇ ಈ ಕೃತಿ -108 ನಾಕು ದಶಕದ ಕತೆಗಳು. ಜೋಗಿ ಅವರು ಮೂಲತಃ ಲೇಖಕರು,ಕಥೆಗಾರರು. ಕಳೆದ 4 ದಶಕದಿಂದ ಬರೆದ ಕತೆಗಳನ್ನಿಲ್ಲಿ ಸಂಗ್ರಹಿಸಿದ್ದು, ಕಥಾ ವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಗಮನ ಸೆಳೆಯುತ್ತದೆ. ಜೋಗಿ ಅವರು ಕಥಾ ಬರವಣಿಗೆಯ ದಾರಿಯಲ್ಲಿ ನಡೆದು ಬಂದ ವೈವಿಧ್ಮಮಯ ಅಂಶಗಳ ಅಧ್ಯಯನಕ್ಕೆ ಈ ಕೃತಿ ಸಹಕಾರಿಯಾಗಿದೆ.
ಜೋಗಿ, ಜಾನಕಿ, ಎಚ್. ಗಿರೀಶ್ ರಾವ್, ಸತ್ಯವ್ರತ...... ಹೀಗೆ ವಿವಿಧ ಅಂಕಿತನಾಮಗಳ ಮೂಲಕವೇ ಓದುಗರನ್ನು ತಲುಪಿದವರು ಗಿರೀಶ್ ರಾವ್ ಹತ್ವಾರ್ (ಜೋಗಿ). ವೃತ್ತಿಯಲ್ಲಿ ಪತ್ರಕರ್ತರಾಗಿರುವ ಜೋಗಿ ಅವರು ಹುಟ್ಟಿದ್ದು 1965 ನವೆಂಬರ್ 16ರಂದು. ಮೂಲತಃ ಸೂರತ್ಕಲ್ ಸಮೀಪದ ಹೊಸಬೆಟ್ಟು ಊರಿನವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಹಾಯ್ ಬೆಂಗಳೂರು ವಾರಪತ್ರಿಕೆಯಲ್ಲಿ ‘ರವಿ ಕಾಣದ್ದು’, ‘ಜಾನಕಿ ಕಾಲಂ’ ಅಂಕಣ ಬರಹಗಳ ಮೂಲಕ ಓದುಗರಿಗೆ ಪರಿಚಯವಾದ ಜೋಗಿ ಅವರು ಪ್ರಸ್ತುತ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಪುರವಣಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ವೃತ್ತಿ ಜೊತೆ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಇವರು ಹಲವಾರು ಕೃತಿಗಳನ್ನು ...
READ MORE