‘ಆಳ ನಿರಾಳ’ ಸಾಹಿತಿ ದೊಡ್ಡರಂಗೇಗೌಡರ ಕವನ ಸಂಕಲನ. ಈ ಕೃತಿಗೆ ಕನ್ನಡದ ಹಲವು ಸಾಹಿತಿಗಳು ಬೆನ್ನುಡಿ ಬರಿದಿದ್ದಾರೆ. ಕನ್ನಡ ನಾಡಿನಲ್ಲಿ ಮೊಟ್ಟಮೊದಲ ಬಾರಿಗೆ ಗ್ರಾಮೀಣ ಬದುಕಿನ ಚಿತ್ರಣವನ್ನು ಕವಿ ಈ ಕೃತಿಯಲ್ಲಿ ಸಮಗ್ರವಾಗಿ ಕಟ್ಟಿಕೊಟ್ಟಿದ್ದಾರೆ ಎನ್ನುತ್ತಾರೆ ಖ್ಯಾತ ಸಾಹಿತಿ ಪ್ರೊ.ಎಲ್.ಎಸ್. ಶೇಷಗಿರಿರಾವ್. ಗ್ರಾಮೀಣ ಪರಿಸರ, ಚೆಲುವು, ಕೌಟುಂಬಿಕ ಪ್ರೀತಿಯ ಸಾಮರಸ್ಯ ಹಾಗೂ ಸಮಾಜಮುಖಿ ಚಿಂತನೆಗಳು ದೊಡ್ಡರಂಗೇಗೌಡರ ಕಾವ್ಯದ ವಿಶೇಷ ಲಕ್ಷಣಗಳಾಗಿದ್ದು, ಜನಸಾಮಾನ್ಯರ ನೋವಿನ ದನಿಗೆ ಇವರ ಕಾವ್ಯ ನಾಲಗೆಯಾಗಿದೆ ಎಂದು ಡಾ. ಸಿದ್ದಲಿಂಗಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕವಿ, ಸಾಹಿತಿ ಮನುಜ ಕಾವ್ಯನಾಮದ ಮೂಲಕ ಪರಿಚಿತರಾಗಿರುವ ದೊಡ್ಡರಂಗೇಗೌಡ ಅವರು, ತುಮಕೂರು ಜಿಲ್ಲೆ ಕುರುಬರಹಳ್ಳಿಯಲ್ಲಿ 1946 ಫೆಬ್ರುವರಿ 7ರಂದು ಜನಿಸಿದರು. ತಂದೆ ರಂಗೇಗೌಡ, ತಾಯಿ ಅಕ್ಕಮ್ಮ. ಬೆಂಗಳೂರು ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಇವರು, ‘ಕನ್ನಡ ನವೋದಯ ಕಾವ್ಯ- ಒಂದು ಪುನರ್ಮೌಲ್ಯಮಾಪನ ’ ಎಂಬ ಪ್ರಬಂಧ ಮಂಡಿಸಿ ಪಿಎಚ್ಡಿ ಪಡೆದರು. ಬೆಂಗಳೂರಿನ ಎಸ್.ಎಲ್.ಎನ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕಾಲೇಜು ದಿನಗಳಲ್ಲೇ ಕವನ, ಕತೆ ರಚನೆಯಲ್ಲಿ ತೊಡಗಿಕೊಂಡಿದ್ದ ಇವರು ಸುಮಾರು 500ಕ್ಕೂ ಹೆಚ್ಚು ಚಲನಚಿತ್ರ ಗೀತೆಗಳನ್ನು ಬರೆದಿದ್ದಾರೆ. ಕಾವ್ಯ, ವಿಮರ್ಶಾ ಕೃತಿಗಳು, ಭಾವಗೀತೆ ಹಾಗೂ ...
READ MORE