‘ಅಲೋಕ’ ಲೇಖಕಿ ಎ.ಪಿ. ಮಾಲತಿ ಅವರ ಕಿರುಕಾದಂಬರಿ. ಈ ಕಾದಂಬರಿ ರಾಗಸಂಗಮ ಮಾಸಪತ್ರಿಕೆಯಲ್ಲಿ ಮೊದಲು ಪ್ರಕಟಗೊಂಡಿತ್ತು. ಆನಂತರ ಪುಸ್ತಕವಾಗಿ ಪ್ರಕಟವಾಗಿದೆ. ಸಾಮಾಜಿಕ ಕಾದಂಬರಿಯಾದ ಅಲೋಕ ಸಂಬಂಧಗಳ ಸೂಕ್ಷ್ಮತೆ ಮತ್ತು ಹೆಣ್ಣಿನ ತೊಳಲಾಟಗಳ ಕತೆಯನ್ನು ಅರ್ಥಪೂರ್ಣವಾಗಿ ಹಿಡಿದಿಟ್ಟಿದೆ.
ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಸ್ಥಾನ ಹೊಂದಿರುವ ಪ್ರಸಿದ್ಧ ಕತೆ, ಕಾದಂಬರಿಕಾರ್ತಿ ಎ. ಪಿ. ಮಾಲತಿಯವರು ಹುಟ್ಟಿದ್ದು ಭಟ್ಕಳದಲ್ಲಿ 1944 ರ ಮೇ 6 ರಂದು. ಅವರ ಎರಡು ಪತ್ತೆದಾರಿ ಕಾದಂಬರಿಗಳು ಹೊರಬಂದಾದ ಕೇವಲ ಹದಿನೈದರ ವಯಸ್ಸು. ಹಿಂದಿ ಭಾಷೆ ಕಲಿತು ಓದಿದ್ದು ಪ್ರೇಮಚಂದರ ಕಥೆ, ಠಾಕೂರರ ಬಂಗಾಲಿ ಅನುವಾದಗಳು. ಅಧ್ಯಾಪಕರು, ಸಾಹಿತ್ಯಾಸಕ್ತರು, ವಿದ್ಯಾವಂತರಾದ ಪತಿ, ಎ.ಪಿ. ಗೋವಿಂದಭಟ್ಟರಿಂದ ದೊರೆತ ಪ್ರೋತ್ಸಾಹ. ಕೃಷಿ ಜೀವನದ ಜೊತೆಗೆ ಹಳ್ಳಿಯ ಹೆಂಗಸರು ಭತ್ತ ಕುಟ್ಟಲು ಪಡುತ್ತಿದ್ದ ಭವಣೆ ನೋಡಿ ಪ್ರಾರಂಭಿಸಿದ ರೈಸ್ಮಿಲ್, ಜೊತೆಗೆ ಹಾಲಿನ ವ್ಯಾಪಾರ. ಜನರೊಡನೆ ಬೆರೆಯುತ್ತಾ ಹೋದಂತೆಲ್ಲ ...
READ MORE