ಲೇಖಕಿ ಗಾಯತ್ರಿ ರಾಜ್ ಅವರ ಆಮ್ರಪಾಲಿ-ಎಂಬುದು ಐತಿಹಾಸಿಕ ಕಾದಂಬರಿ. ವೈಶಾಲಿನಗರದ ಅತ್ಯಂತ ಸುಂದರ ಯುವತಿ ಆಮ್ರಪಾಲಿ ವೈಶಾಲಿನಗರದ ರಾಜ ಮನುದೇವ ಆಕೆಯನ್ನು ಕಾಮುಕ ಕಣ್ಣಿನಿಂದ ನೋಡಿ ವರಿಸಲು ಹಾತೊರೆಯುತ್ತಾನೆ. ಆಮ್ರಪಾಲಿಯ ಪ್ರೇಮಿ ಪುಷ್ಪಕುಮಾರರನ್ನು ಮದುವೆಯಾದ ದಿನವೇ ಕೊಲ್ಲಿಸುತ್ತಾನೆ. ಆದರೂ, ಆತನ ಪ್ರಯತ್ನ ಕೈಗೊಡಲಿಲ್ಲ ನಗರದ ವಧುವನ್ನಾಗಿಸಲು ಸಂಚು ಹೂಡುತ್ತಾನೆ. ಈ ಮಧ್ಯೆ, ಮಗದ ರಾಜ್ಯದ ಅರಸ ಬಿಂಬಸಾರನು ವಿಣೆ ಕಲಿಸುವ ನೆಪದಲ್ಲಿ ವೇಷ ಮರೆಸಿಕೊಂಡು ಆಮ್ರಪಾಲಿ ಹತ್ತಿರ ಇರುತ್ತಾನೆ. ಅವರ ಮಧ್ಯೆ ಪ್ರೇಮಾಂಕುರವಾಗಿ ಮಗು ಸಹ ಜನಿಸುತ್ತದೆ. ಆದರೆ, ಆಮ್ರಪಾಲಿ, ಮಗದ ರಾಜ್ಯಕ್ಕೆ ತೆರಳು ನಿರಾಕರಿಸುತ್ತಾಳೆ. ಇದನ್ನು ತಂದೆಗೆ ಮಾಡಿದ ಅವಮಾನ ಎಂದು ತಿಳಿದ ಬಿಂಬಸಾರನ ಮಗನು ವೈಶಾಲಿ ರಾಜ್ಯದ ಮೇಲೆ ದಂಡೆತ್ತಿ ನಾಶಪಡಿಸುತ್ತಾನೆ. ಆ ಮಗನೂ (ಅಜಾತಶತ್ರು) ಸಹ ಆಮ್ರಪಾಲಿಯ ಮೇಲೆ ಮನಸು ಮಾಡುತ್ತಾನೆ. ಆದರೆ, ಆಮ್ರಪಾಲಿ ಒಪ್ಪುವುದಿಲ್ಲ. ಕೊನೆಗೆ ಬುದ್ಧನ ಶಿಷ್ಯೆಯಾಗಿ ಹೊರಟು ಹೋಗುತ್ತಾಳೆ ಎಂಬುದು ಆಮ್ರಪಾಲಿಯ ಕಥೆ. ಈ ಅಂಶವನ್ನೇ ಸಾಹಿತ್ಯವಾಗಿಸಿದ ಕಾದಂಬರಿ ಇದು.
ಲೇಖಕಿ, ಕತೆಗಾರ್ತಿ ಗಾಯತ್ರಿ ರಾಜ್ ಮೂಲತಃ ದಾವಣಗೆರೆಯವರು. ವಿಜ್ಞಾನ ವಿದ್ಯಾರ್ಥಿಯಾದರು ಅವರು ಸಾಹಿತ್ಯದಲ್ಲಿ ಅಪಾರ ಆಸಕ್ತಿ. ಅವರ ಕತೆಗಳು ಸುಧಾ, ತರಂಗ, ಕರ್ಮವೀರದಲ್ಲಿ ಪ್ರಕಟಗೊಂಡಿದ್ದು ವಿಜಯಕರ್ನಾಟಕ, ಪ್ರಜಾವಾಣಿ, ಉದಯವಾಣಿಯಲ್ಲಿ ನಿಯಮಿತವಾಗಿ ಲೇಖನ ಪ್ರಕಟಣೆ ಕಾಣುತ್ತಿವೆ. ಸಂಪದ ಸಾಲು ಎಂಬ ಪತ್ರಿಕೆಯಲ್ಲಿ ಒಂದು ವರ್ಷದಿಂದ "ಹೆಣ್ಣೆ ಬದುಕು ಸುಂದರ ಕಣೆ" ಎಂಬ ಅಂಕಣವನ್ನು ಬರೆಯುತ್ತಿದ್ದಾರೆ. ಅವರ ಕತಾ ಸಂಕಲನ ‘ಬಣ್ಣದ ಜೋಳಿಗೆ’ ಇತ್ತಿಚೆಗೆ ಪ್ರಕಟವಾಗಿದೆ. ...
READ MORE