ವಸುಂಧರ ಭೂಪತಿ ಅವರು ವೃತ್ತಿಯಲ್ಲಿ ವೈದ್ಯರು. ಅವರ ಈ ಸಂಗ್ರಹದ ಮೊದಲ ಪುಸ್ತಕದಲ್ಲಿ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕೆಂದು ಹೇಳುವ ನಿಖರ ಲೇಖನಗಳು ಇಲ್ಲಿ ದಾಖಲಾಗಿವೆ. ಹಣ್ಣು, ಸೊಪ್ಪು, ತರಕಾರಿಗಳಲ್ಲಿ ಔಷಧೀಯ ಗುಣಗಳು, ಅವುಗಳನ್ನು ಮಿತವಾಗಿ-ಕಾಲಘಟ್ಟದಲ್ಲಿ ಅಗತ್ಯ ಪ್ರಮಾಣದಲ್ಲಿ ಸೇವಿಸುವುದರಿಂದ ದೇಹಾರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬಹುದು, ಸಹಜ ಜೀವನ ಕ್ರಮವನ್ನು ನಡೆಸುವ ಬಗೆಯನ್ನು ಈ ಕೃತಿ ವಿವರಿಸುತ್ತದೆ.
ಡಾ. ವಸುಂಧರಾ ಭೂಪತಿ ಕರ್ನಾಟಕದ ರಾಯಚೂರಿನಲ್ಲಿ 1962 ರ ಜೂನ್ 5 ರಂದು ಜನಿಸಿದರು. ಇವರು ಬರೆದಿರುವ ವಿಜ್ಞಾನ ಪ್ರಥಮ ಚಿಕಿತ್ಸೆ, ಶುಚಿತ್ವ, ಆರೋಗ್ಯ-ಆರೈಕೆ ಲೇಖನಗಳು ವಾರಪತ್ರಿಕೆ ಹಾಗೂ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿದೆ. ವಸುಂದರಾ ಭೂಪತಿಯವರು ವೈದ್ಯಕೀಯ ಸಾಹಿತ್ಯ ಮಾಲೆ, ಕನ್ನಡ ಪುಸ್ತಕ ಪ್ರಾಧಿಕಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಮಾಸಪತ್ರಿಕೆ ‘ಬಾಲ ವಿಜ್ಞಾನ’, ಆರೋಗ್ಯ ಅನುರಾಗ ಮಾಸಪತ್ರಿಕೆ, ಆಯುರ್ವೇದ ಮತ್ತು ಯೋಗ ಮಾಸಪತ್ರಿಕೆ, ವಿಜ್ಞಾನ ಲೋಕ ತ್ರೈಮಾಸಿಕ ಪತ್ರಿಕೆ ಹಾಗೂ ಆರೋಗ್ಯ ವಿಜ್ಞಾನ ತ್ರೈಮಾಸಿಕ ಪತ್ರಿಕೆಗಳ ಸಂಪಾದಕ ಮಂಡಳಿಯ ಸದಸ್ಯರಾಗಿದ್ದಾರೆ. ಮತ್ತು ವೈದ್ಯ ಲೋಕ ಮಾಸಪತ್ರಿಕೆಯ ಸಂಪಾದಕರಾಗಿ ...
READ MORE