ಅಬ್ಬಲೂರು ಚರಿತೆ

Author : ಎನ್. ಬಸವಾರಾಧ್ಯ

Pages 170

₹ 165.00




Year of Publication: 1973
Published by: ಕನ್ನಡ ಅಧ್ಯಯನ ಸಂಸ್ಥೆ
Address: ಗುಲ್ಬರ್ಗ ವಿಶ್ವವಿದ್ಯಾಲಯ, ಕಲಬುರ್ಗಿ

Synopsys

'ಅಬ್ಬಲೂರು ಚರಿತೆ’ ಕೃತಿಯು ಎನ್. ಬಸವಾರಾಧ್ಯ ಅವರ ಗ್ರಂಥವಾಗಿದೆ. ಈ ಕೃತಿಯಲ್ಲಿನ ವಿಚಾರಗಳು ಹೀಗಿವೆ; ಕನ್ನಡ ಅಧ್ಯಯನಕ್ಕೆ ಸಂಬಂಧಪಟ್ಟ ಚಟುವಟಿಕೆಗಳೆಲ್ಲವನ್ನೂ ಕೇಂದ್ರೀಕರಿಸುವ ದೃಷ್ಟಿಯಿಂದ 1966ರ ಕೊನೆಯಲ್ಲಿ ಪ್ರಾಚ್ಯ ಸಂಶೋಧನಾಲಯದ ಕನ್ನಡ ವಿಭಾಗವನ್ನು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ವಿಲೀನಗೊಳಿಸಲಾಯಿತು. ಅಂದಿನಿಂದ ಈ ಭಾಗವನ್ನು ಅಧ್ಯಯನ ಸಂಸ್ಥೆಯ 'ಸಂಪಾದನ ವಿಭಾಗ'ವೆಂದು ಹೆಸರಿಸಲಾಯಿತು. ಕ್ರಿ. ಶ. 1436ಲ್ಲಿ ಪ್ರತಿಮಾಡಲಾಗಿರುವ ಹಾಗೂ ಅತ್ಯಂತ ಪ್ರಾಚೀನ ಉಪಲಬ್ಧ ಹಸ್ತಪ್ರತಿ ಯಾಗಿರುವ 'ಪುಷ್ಪದಂತ ಪುರಾಣ'ದ ಹಸ್ತಪ್ರತಿಯಿಂದ ಹಿಡಿದು 1850ಲ್ಲಿ ಲಿಖಿತವಾಗಿರುವ 'ಪ್ರಭಾವತಿ ಪರಿಣಯ'ದ ಹಸ್ತಪ್ರತಿಯವರೆಗೆ ಇಂದು 5000ಕ್ಕೂ ಹೆಚ್ಚು ಹಸ್ತಪ್ರತಿಗಳನ್ನು ಹೊಂದಿರುವ 'ಸಂಪಾದನ ವಿಭಾಗ' ಅಧ್ಯಯನ ಸಂಸ್ಥೆಯ ಒಂದು ಪ್ರಧಾನ ಅಂಗವಾಗಿದೆ.

ಕನ್ನಡ ಭಾಷಾ ಸಾಹಿತ್ಯಗಳಿಗೆ ಸಂಬಂಧಿಸಿದ ಅಧ್ಯಯನವನ್ನು ಕೈಗೊಳ್ಳುವವರಿಗೆ, ಸಂಶೋಧಕರಿಗೆ, ಸ್ನಾತಕ ಮತ್ತು ಸ್ನಾತಕೋತ್ತರ ಕನ್ನಡ ವಿದ್ಯಾರ್ಥಿಗಳಿಗೆ ಇದು ಆಕರ ಗ್ರಂಥಗಳ ತವರಾಗಿದೆ, ಪ್ರೇರಣೆಯ ಸೋತವಾಗಿದೆ. ಮುದ್ರಣ ಸೌಲಭ್ಯ ಈಗ್ಗೆ ಕೆಲವು ಶತಮಾನಗಳಿಂದೀಚೆಗೆ ಮಾನವ ಜನಾಂಗಕ್ಕೆ ದೊರೆತಿರುವ ವರ. ಈ ಸೌಲಭ್ಯವಿಲ್ಲದಿದ್ದ ಕಾಲದಲ್ಲಿ ಓಲೆಗರಿ ಅಥವಾ ತಾಡಪತ್ರದ ಮೇಲೆ ಕಂಠದಿಂದ ಕೊರೆದು, ಅನನ್ಯ ಶ್ರದ್ಧೆಯಿಂದ ಆ ಸಾಹಿತ್ಯವನ್ನು ಅಭ್ಯಸಿಸಿ, ಅದನ್ನು ಕಾಯ್ದು ಕೊಂಡು ಬಂದ ಹಿರಿಯರಿಂದ ಅಂದಿನ ಅಪೂರ್ವಸಾಹಿತ್ಯ ನಮ್ಮ ಸಂಪತ್ತಾಗಿ ಉಳಿದಿದೆ. ತಮಗೆ ಪ್ರಿಯವೆನಿಸಿದ ಸಾಹಿತ್ಯ ಕೃತಿಗಳನ್ನು ಪ್ರತಿಮಾಡಿಸಿ ಇಟ್ಟುಕೊಳ್ಳುತಿದ್ದುದು ಆ ಕಾಲದ ಒಂದು ಬಗೆಯ ಹವ್ಯಾಸವೇ ಆಗಿತ್ತು. ಈ ಕಾರಣದಿಂದಾಗಿಯೇ ಓಲೆಗರಿಯ ಒಂದು ಸಂಪುಟದಲ್ಲಿಯೇ ಅನೇಕ ಗ್ರಂಥಗಳನ್ನು, ಗ್ರಂಥಭಾಗಗಳನ್ನು ಪ್ರತಿ ಲಿಪೀಕರಿಸಿರುವುದನ್ನು ಕಾಣುತ್ತೇವೆ. ಹಸ್ತಪ್ರತಿಗಳ ಅನೇಕ ಪ್ರತಿಗಳನ್ನು ಸಿದ್ಧಪಡಿಸಿ ಹಂಚುವುದನ್ನು ಪುಣ್ಯ ಕಾರ್ಯವೆಂದು ಬಗೆದು, ಆ ರೀತಿ ಮಾಡುತ್ತಿದ್ದುದಕ್ಕೂ ಉದಾ ಹರಣೆಗಳಿವೆ. ಪ್ರತಿಲಿಪೀಕರಣ ಹಲವರಿಗೆ ಜೀವನೋಪಾಯದ ಸಾಧನವಾಗಿಯೂ ಇತ್ತು. ಹಸ್ತಪ್ರತಿಗಳನ್ನು ಸುಂದರ, ಸಂದರ್ಭೋಚಿತ ಚಿತ್ರಗಳಿಂದ ಅಲಂಕರಿಸುವ ವಾಡಿಕೆಯೂ ಇತ್ತು. ಇವು ನಮ್ಮ ಜನಗಳ ಸಾಹಿತ್ಯ-ಶಾಸ್ತ್ರ-ಕಲಾಭಿರುಚಿಯ ಪ್ರತೀಕವಾಗಿವೆ.

About the Author

ಎನ್. ಬಸವಾರಾಧ್ಯ
(20 February 1926 - 06 December 2013)

ಸಂಶೋಧಕ, ಲೇಖಕ ಎನ್. ಬಸವಾರಾಧ್ಯ ಅವರು ಮೂಲತಃ ಕೋಲಾರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ನಾರಸಿಂಹನಹಳ್ಳಿಯವರು. ನಂಜುಂಡಾರಾಧ್ಯ ಬಸವಾರಾಧ್ಯ ಇವರ ಕಾವ್ಯನಾಮ. 1926 ಫೆಬ್ರುವರಿ 20 ರಂದು ಜನಿಸಿದರು. ತಂದೆ ನಂಜುಂಡಾರಾಧ್ಯರು 3 ವರ್ಷಗಳ ಕಾಲ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಸುಮಾರು 6 ವರ್ಷ ಬಿ.ಎಂ.ಶ್ರೀ. ಸ್ಮಾರಕ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದರು. ತಾಯಿ ಗಿರಿಜಮ್ಮ. ಗೌರಿಬಿದನೂರು ಹಾಗೂ ಬೆಂಗಳೂರಿನ ಶಿಕ್ಷಣ ಪಡೆದಿದ್ದ ಇವರು ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತದ ಪದವಿ ಪಡೆದರು. ಮೈಸೂರು ವಿಶ್ವವಿದ್ಯಾಲಯದ ಪ್ರಾಚ್ಯ ವಿದ್ಯಾ ಸಂಶೋಧನಾಲಯದಲ್ಲಿ ಸ್ನಾತಕ ವಿಶೇಷ ತಜ್ಞರಾಗಿ ವೃತ್ತಿಜೀವನ ಆರಮಭಿಸಿದ ಇವರು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟು ...

READ MORE

Related Books