‘ಅಗೆ ಬಗೆ’ ಲೇಖಕ ಅಜಕ್ಕಳ ಗಿರೀಶ ಭಟ್ ಅವರ ಲೇಖನ ಸಂಕಲನ. ಬೇರೆ ಬೇರೆ ಸಂದರ್ಭಗಳಲ್ಲಿ ಬರೆದ ಲೇಖನಗಳು ಇಲ್ಲಿ ಸಂಕಲನಗೊಂಡಿವೆ. ಪುಸ್ತಕದ ಕುರಿತು ಬರೆಯುತ್ತಾ ಬದುಕಿಗೆ ಸಂಬಂಧಿಸಿದ ಎಲ್ಲ ವಿಚಾರಗಳ ಬಗ್ಗೆ ನಮ್ಮಲ್ಲಿ ನಡೆಯುವ ಜಿಜ್ಞಾಸೆಗಳು ಅಂತಿಮವಾಗಿ ಪರಂಪರೆ ಮತ್ತು ಆಧುನಿಕತೆ ಎಂಬೆರಡು ಪರಿಕಲ್ಪನೆಗಳ ಆಚೀಚೆ ಸುತ್ತಲಾರಂಭಿಸುತ್ತವೆ. ಬದುಕೆಂದರೆ ಅಗೆದಷ್ಟೂ ಆಳವುಳ್ಳದ್ದು, ಬಗೆದಷ್ಟೂ ಬಗೆಹರಿಯದ್ದು. ಹೀಗಿದ್ದರೂ ಭಾಷೆ, ಸಂಸ್ಕೃತಿ ಇತ್ಯಾದಿ ಸಂಗತಿಗಳನ್ನು ನನಗೆ ಕಂಡಂತೆ ವಿವಿಧ ಮಗ್ಗುಲುಗಳಿಂದ ನೋಡಲು ಯತ್ನಿಸಿದ ಭಾಗವಾಗಿ ಈ ಕೃತಿ ರೂಪುಗೊಂಡಿದೆ ಎನ್ನುತ್ತಾರೆ ಲೇಖಕರು.
ಅಜಕ್ಕಳ ಗಿರೀಶ್ ಭಟ್ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ವೃತ್ತಿಯಲ್ಲಿ ಕನ್ನಡ ಅಧ್ಯಾಪಕರು. ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ಆಗಿದ್ದರು. ಸದ್ಯ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ಮೈಸೂರು ವಿಶ್ವ ವಿದ್ಯಾಲಯದಲ್ಲಿ ಅಂಚೆ ತೆರಪಿನ ಶಿಕ್ಷಣದ ಮೂಲಕ ಇಂಗ್ಲಿಷ್ ಸ್ನಾತಕೋತ್ತರ ಪದವಿ ಪಡೆದರು. ಡಾ. ಡಿ.ಆರ್. ನಾಗರಾಜ್ ಕುರಿತು ಒಂದು ಅಧ್ಯಯನದ ಬಗ್ಗೆ ಮಹಾಪ್ರಬಂಧವನ್ನು ರಚಿಸಿ ಡಾ. ಶಿವರಾಮಶೆಟ್ಟಿಯವರ ಮಾರ್ಗದರ್ಶನದಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದರು. ಭಾಷೆ, ಸಾಹಿತ್ಯ, ಸಂಸ್ಕೃತಿ ಕುರಿತು ಲೇಖನಗಳನ್ನು ಬರೆಯತೊಡಗಿದ ಅವರ ಐವತ್ತಕ್ಕೂ ಹೆಚ್ಚು ಲೇಖನಗಳು ...
READ MORE