ಕನ್ನಡದಲ್ಲಿ ಲಲಿತ ಪ್ರಬಂಧಗಳು ಹಾಸ್ಯ-ಅಪಹಾಸ್ಯ-ಉಪಹಾಸ್ಯ ಇತ್ಯಾದಿ ಏನೇನೋ ಸ್ವರೂಪ ಪಡೆದುಕೊಂಡು ದಿಕ್ಕುತಪ್ಪಿ ಅಲೆಯುತ್ತಿದ್ದಾಗ ಅದಕ್ಕೊಂದು ಚೌಕಟ್ಟು ಒದಗಿಸಿ ಮತ್ತೆ ಓದುಗರು ಲಲಿತ ಪ್ರಬಂಧಗಳ ಕಡೆ ಆಕರ್ಷಿತರಾಗುವಂತೆ ಮಾಡಿದವರು ಶ್ರೀನಿವಾಸ ವೈದ್ಯರು. ಕಾದಂಬರಿ ಕ್ಷೇತ್ರಕ್ಕೂ ಲಗ್ಗೆ ಹಾಕಿದ ವೈದ್ಯರು ’ಹಳ್ಳ ಬಂತು ಹಳ್ಳ’ ಎಂಬ ಮಹತ್ವವದ ಕಾದಂಬರಿಯನ್ನು ಬರೆದಿದ್ದಾರೆ. ಅಗ್ನಿಕಾರ್ಯ ವೈದ್ಯರ ಪ್ರಥಮ ಕಥಾ ಸಂಕಲನ. ಈ ಸಂಕಲನದ ಕತೆಗಳು ಬಿಡಿಬಿಡಿಯಾಗಿ ಪ್ರಕಟವಾಗಿ ಕನ್ನಡದ ಪ್ರಮುಖ ಕಥೆಗಾರರಲ್ಲೊಬ್ಬರು ಎಂದು ಗುರುತಿಸುವಂತೆ ಮಾಡಿವೆ.
ನಗೆಬರಹ, ಹಾಸ್ಯಪ್ರಧಾನ ಸಾಹಿತ್ಯ ಹಾಗೂ ಲಲಿತ ಪ್ರಬಂಧ ಮುಂತಾದ ಪ್ರಕಾರಗಳಿಂದ ಒಮ್ಮೆಲೆ ಗಂಭೀರ ಸಾಹಿತ್ಯದೆಡೆಗೆ ಜೀಕಿಕೊಂಡ ಶ್ರೀನಿವಾಸ ವೈದ್ಯರು ಹುಟ್ಟಿದ್ದು ಧಾರವಾಡ ಜಿಲ್ಲೆಯ ನವಲಗುಂದದಲ್ಲಿ. ತಂದೆ ಬಿ.ಜಿ. ವೈದ್ಯ, ಸುಪ್ರಸಿದ್ಧ ವಕೀಲರು. ತಾಯಿ ಸ್ವಾತಂತ್ರ್ಯ ಹೋರಾಟಗಾರರ ಮನೆತನದಿಂದ ಬಂದ ಸುಂದರಾಬಾಯಿ. ಪ್ರಾರಂಭಿಕ ಶಿಕ್ಷಣದಿಂದ ಹಿಡಿದು ಎಂ.ಎ.ವರೆಗೂ ಧಾರವಾಡದಲ್ಲೇ ಶಿಕ್ಷಣ ಪೂರ್ಣ ಗೊಳಿಸಿದರು. 1959ರಲ್ಲಿ ಅರ್ಥಶಾಸ್ತ್ರ-ರಾಜ್ಯಶಾಸ್ತ್ರದಲ್ಲಿ ಎಂ.ಎ. ಪದವಿ ಪಡೆದ ಅವರು ಬ್ಯಾಂಕಿಂಗ್ ಪರೀಕ್ಷೆಯಾದ ಸಿ.ಎ.ಐ.ಐ.ಬಿ ಮತ್ತು ಭಾರತೀಯ ವಿದ್ಯಾಭವನದಿಂದ ಪಡೆದ ಪತ್ರಿಕೋದ್ಯಮ ಡಿಪ್ಲೊಮಾವನ್ನು ಪೂರೈಸಿದರು. ಮನೆಯಲ್ಲಿದ್ದುದು ಸಾಹಿತ್ಯಕ, ಸಾಂಸ್ಕೃತಿಕ ವಾತಾವರಣ. ಬಿಡುವಿನ ವೇಳೆಯಲ್ಲೆಲ್ಲಾ ಕೈಯಲ್ಲೊಂದು ಕಾದಂಬರಿ ಹಿಡಿದು ...
READ MORE