ಅಧ್ರುವ ಎಂದರೆ ಅಸ್ಥಿರ ಎಂದರ್ಥ. ಆಧ್ಯಾತ್ಮಿಕ ಅಂಶ ಕತೆಯಲ್ಲಿ ಸೇರಿಕೊಂಡರೆ ಅದರ ಮೌಲ್ಯ ಹೆಚ್ಚುತ್ತದೆ. ಬಹಳಷ್ಟು ಕತೆಗಳಲ್ಲಿ ವೇದಾಂತ ಸೇರಿಸಲು ಪ್ರಯತ್ನಿಸಿದ್ದಾರೆ. .ಹೀಗಾಗಿ ಅಧ್ರುವ ಎಂಬ ಶೀರ್ಷಿಕೆ ಈ ಸಂಕಲನಕ್ಕಿದೆ.
’ಕ್ಷಿತಿಜ್ ಬೀದರ್’ ಎಂಬ ಕಾವ್ಯನಾಮದಿಂದ ಸಾಹಿತ್ಯ ರಚನೆ ಮಾಡುವ ಬಸವರಾಜ ಮಠಪತಿ ಅವರು ಜನಿಸಿದ್ದು 1954ರ ಜೂನ್ 1 ರಂದು. ಬೀದರ್ ಜಿಲ್ಲೆಯ ಹುಮನಾಬಾದ ತಾಲೂಕಿನ ಬನ್ನಳ್ಳಿ ಎಂಬ ಗ್ರಾಮದಲ್ಲಿ. ತಂದೆ ನಾಗಯ್ಯ ಸ್ವಾಮಿ ಮಠಪತಿ, ತಾಯಿ ಶಾರದಾ ದೇವಿ. ಬಸವರಾಜ ಅವರ ಕುಟುಂಬವು 1957 ರಲ್ಲಿ ನಿರ್ಣಾ ಗ್ರಾಮಕ್ಕೆ ವಲಸೆ ಬಂದು ನೆಲೆಸಿತು. ತಮ್ಮ ಪ್ರಾಥಮಿಕ ಮತ್ತು ಹೈಸ್ಕೂಲ್ ಶಿಕ್ಷಣವನ್ನು ನಿರ್ಣಾ ಗ್ರಾಮದಲ್ಲಿ ಮುಗಿಸಿ ಬಸವರಾಜ ಅವರು ಬಿ. ಎಸ್ಸಿ. ಪದವಿ (1974) ಯನ್ನು ಬೀದರನಲ್ಲಿ ಪೂರ್ಣಗೊಳಿಸಿದರು. ಮೈಸೂರಿನಲ್ಲಿ ಪಿ.ಜಿ.ಡಿ.ಎಸ್. (1979), ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ತತ್ವಶಾಸ್ತ್ರದಲ್ಲಿ ಎಂ. ...
READ MORE