‘ಅಕಾಕಿ ಕೋಟು’ ಕೃತಿಯು ಚನ್ನಕೇಶವ ಅವರ ನಾಟಕಸಂಕಲನವಾಗಿದೆ. ಈ ಕೃತಿಗೆ ಮುನ್ನುಡಿ ಬರೆದಿರುವ ಮೌನೇಶ ಬಡಿಗೇರ ಅವರು, ಚನ್ನಕೇಶವ ಬರಿದೆ ಮನರಂಜನೆಯನ್ನು ನೀಡುವ ನಾಟಕಗಳನ್ನು ಆಯ್ಕೆ ಮಾಡಿಕೊಂಡಿಲ್ಲ. ಎಲ್ಲವೂ ಆಂತರ್ಯದಲ್ಲಿ ಆಯಾ ಕಾಲದ ಏರಿಳಿತಗಳನ್ನು ಧ್ವನಿಸುವಂತಹ ನಾಟಕಗಳನ್ನೇ ಆರಿಸಿಕೊಂಡು ಬರೆದುಕೊಂಡಿದ್ದಾರೆ ಮತ್ತು ಈ ಎಲ್ಲಾ ನಾಟಕಗಳಲ್ಲಿ ಬರೀ ನಟರೇ ಮುಖ್ಯವಾಗಿರದೆ ನಾಟಕೀಯತೆಯೇ ಪ್ರಧಾನವಾಗಿವೆ. ಸಂಗೀತ, ಸಂಗೀತದ ಮೇಳ, ಸೂತ್ರಧಾರ, ಅವರ ಹಿಮ್ಮೇಳ, ಇವೆಲ್ಲವೂ ಗ್ರೀಕ್ ನಾಟಕಗಳಲ್ಲಿ ಹಾಗೂ ನಮ್ಮ ಜನಪದ ನಾಟಕಗಳಲ್ಲಿ ಕಾಣಬಹುದಾದ ಅತ್ಯಂತ ಜನಪ್ರಿಯ ಹಾಗೂ ಅತ್ಯಂತ ಯಶಸ್ವೀ ನಾಟಕೀಯ ತಂತ್ರಗಳಾಗಿವೆ. ಈ ತಂತ್ರಗಳನ್ನು ಚನ್ನಕೇಶವ ಅವರು ತಮ್ಮ ಬಹುತೇಕ ನಾಟಕಗಳಿಗೆ ಬಹಳ ಯಶಸ್ವಿಯಾಗಿ ಕಸಿಮಾಡಿಕೊಂಡಿದ್ದಾರೆ ಎಂದಿದ್ದಾರೆ.
©2024 Book Brahma Private Limited.