ಅಲ್ಲಮನನ್ನು ಅವನ ಕಾಲದಲ್ಲಿಟ್ಟು ನೋಡುವಂತೆಯೇ, ತಮ್ಮ ಕಾಲದ ದೃಷ್ಟಿಯಿಂದಲೂ ವಿಶ್ಲೇಷಿಸುವ ನಾಗರಾಜರ ಪ್ರತಿಭೆ ಅಸಾಮಾನ್ಯ ಶಕ್ತಿಯುಳ್ಳದ್ದು. ಏಕಕಾಲದಲ್ಲೆ ದಾರ್ಶನಿಕನೂ, ಕವಿಯೂ ಆದ ಅಲ್ಲಮನನ್ನು, ತತ್ಪರವಾಗಿ ಅರಿಯುವ ಪ್ರಯತ್ನ ಇಲ್ಲಿ ಆಗಿದೆ. ಈ ಕೃತಿಯ ಉದ್ದಕ್ಕೂ ಸೂಕ್ಷ್ಮವಾಗಿ, ವಿದ್ವತ್ಪೂರ್ಣವಾಗಿ ಲೇಖಕರು ಅದನ್ನು ಕಟ್ಟಿಕೊಟ್ಟಿದ್ದಾರೆ. ಗಾಢವಾದ ಒಳನೋಟಗಳಿಂದ ಬೆಳಗುವ ಗದ್ಯಶೈಲಿಯನ್ನು ಇಲ್ಲಿ ಕಾಣಬಹುದು. ಓದುಗನ ಪ್ರಜ್ಞೆಯನ್ನೇ ಪರಿಷ್ಕರಿಸಿ ಉಲ್ಲಾಸದಲ್ಲಿ ಹಿಗ್ಗುವಂತೆ ಮಾಡುವ ಈ ಕೃತಿ, ಪ್ರಪಂಚದ ಯಾವ ಭಾಷೆಯಲ್ಲಾದರೂ ಉತ್ಕೃಷ್ಟ ಕೃತಿ ಎನ್ನಿಸಿಕೊಂಡೀತು. ಈ ಕೃತಿ ಕನ್ನಡ ಸಾರಸ್ವತ ಲೋಕದಲ್ಲಿ ಗಂಭೀರವಾದ ಚರ್ಚೆಗೆ ನಾಂದಿ ಹಾಡಿದೆ.
©2024 Book Brahma Private Limited.