ಕೇಂದ್ರ ಮಾಜಿ ಸಚಿವ ಅನಂತಕುಮಾರ ಅವರ ಜೀವನ ಚಿತ್ರ ನೀಡಿರುವ ಕೃತಿ-ಅನಂತತಾನನಂತವಾಗಿ ಸಾಗಿ ಹೋದ ಕರ್ಮಯೋಗಿ. ರಂಗ ಕಲಾವಿದ ಯಶವಂತ ಸರದೇಶಪಾಂಡೆ ಬರೆದ ಕೃತಿ ಇದು. ಬಿಜೆಪಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ಕಾರ್ಯಕರ್ತರಾಗಿ ನಂತರ ಸಂಸದರಾಗಿ, ಅಟಲ್ ಬಿಹಾರಿ ವಾಜಪೇಯಿ ಹಾಗೂ ನರೇಂದ್ರ ಮೋದಿ ಅವರ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು. ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟ ಪೂರೈಸುವ ಅದಮ್ಯ ಚೇತನ ಎಂಬ ಸಂಸ್ಥೆಯ ಸ್ಥಾಪಕರು. ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿದ್ದಾಗಲೇ ಕ್ಯಾನ್ಸರ್ ಕಾಯಿಲೆಯಿಂದ ಹಠಾತ್ ನಿಧನರಾದರು.
ರಂಗ ಕಲಾವಿದ ಯಶವಂತ ಸರದೇಶಪಾಂಡೆ ಅವರು ಮೂಲತಃ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ (ಜನನ: 13-06-1965) ಉಕ್ಕಲಿ ಗ್ರಾಮದವರು. ತಂದೆ ಶ್ರೀಧರರಾವ್ ಸೆರದೇಶಪಾಂಡೆ, ತಾಯಿ ಕಲ್ಪನಾದೇವಿ. ಹೆಗ್ಗೋಡಿನ ನಿನಾಸಂ ನಾಟಕ ಸಂಸ್ಥೆಯಿಂದ ಡಿಪ್ಲೊಮಾ ಪದವೀಧರರು. ನ್ಯೂಯಾರ್ಕ್ ವಿಶ್ವವಿದ್ಯಾಯದಿಂದ ನಾಟಕ ರಚನೆ, ಚಲನ ಚಿತ್ರ ಸಂಭಾಷಣೆಯ ವಿಶೇಷ ತರಬೇತಿ ಪಡೆದಿದ್ದಾರೆ. ಅಂಧಯುಗ, ಇನ್‌ಸ್ಪೆಕ್ಟರ್ ಜನರಲ್, ಮಿಡ್‌ಸಮರ್ ನೈಟ್ಸ್‌ಡ್ರೀಮ್, ಬಾಡಿಗೆ ಮನೆ, ಕಿತ್ತೂರು ರಾಣಿ ಚೆನ್ನಮ್ಮ, ಪುಷ್ಪರಾಣಿ, ಗಲಿವರನ ಯಾತ್ರೆ, ಬೆಪ್ಪುತಕ್ಕಡಿ ಬೋಳೇ ಶಂಕರ, ತುಂಟ ಮಕ್ಕಳ ತಂಟೆ, ಮಕ್ಕಳೆರಡೇ ಇರಲಿ, ಕುಂಟಾ ಕುಂಟ ಕುರವತ್ತಿ ಮುಂತಾದ ಅರವತ್ತಕ್ಕೂ ಹೆಚ್ಚು ನಾಟಕಗಳ ...
READ MORE