ಅಂಚಿತ - ಗೀತಾ ಶೆಣೈ (ಗೀತಾ ಬಾಲಿ ನಾಯಕ್ ಪಿ) ಅವರು ಬರೆದ ವಿಮರ್ಶಾ ಲೇಖನಗಳ ಸಂಗ್ರಹವಿದು. ಕನ್ನಡ ಸಾಹಿತ್ಯ ಮತ್ತು ಕನ್ನಡದ ಕೆಲವು ಪ್ರಮುಖ ಗ್ರಂಥಗಳ ಕುರಿತಾದ ವಿಮರ್ಶಾತ್ಮಕ ಲೇಖನಗಳಿವೆ. ಕನ್ನಡ ಮಹಿಳಾ ಸಾಹಿತ್ಯ, ಕನ್ನಡದಲ್ಲಿ ಮಹಿಳಾ ಅತ್ಮಚರಿತ್ರೆಗಳು, ಮಹಿಳಾ ಭಾಷಾಂತರ ಸಾಹಿತ್ಯ ಸ್ವರೂಪ ಮೊದಲಾದ ಕೆಲವು ಮುಖ್ಯ ಲೇಖನಗಳನ್ನು ಈ ಕೃತಿಯು ಒಳಗೊಂಡಿದೆ.
ಗೀತಾ ಶೆಣೈ ಕನ್ನಡದ ಪ್ರಮುಖ ಲೇಖಕಿ. ಇವರು 1954 ಜೂಬ್ 13 ರಂದು ದಕ್ಷಿಣ ಜಿಲ್ಲೆಯಲ್ಲಿ ಜನಿಸಿದರು. ಹಂಪಿಯಿಂದ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಪಿಹೆಚ್.ಡಿ, ಪದವಿ ಪಡೆದಿದ್ದಾರೆ. ಇಂದಿರಾಗಾಂಧಿ ಮಹಿಳಾ ಅಧ್ಯಯನದಲ್ಲಿ ಸಿಡಬ್ಲ್ಯೂಇಡಿ ಕೋರ್ಸ್ ಮುಗಿಸಿದ್ದಾರೆ, ಜೀವನ ಚರಿತ್ರೆ, ಅನುವಾದ ಮತ್ತು ಮಹಿಳಾ ಅಧ್ಯಯನ ಇತ್ಯಾದಿ ಪ್ರಕಾರಗಳಲ್ಲಿ 20ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವರ ಮೊದಲ ಕೃತಿ ಝುಂಪಾ ಲಾಹಿರಿಯವರ ಇಂಟರ್ಪ್ರಿಟರ್ ಆಫ್ ಮ್ಯಾಲಡೀಸ್ ಕಥಾಸಂಕಲನದ ಅನುವಾದ `ಬೇನೆಗಳ ದುಭಾಷಿ'. ಬೇನೆಗಳ ದುಭಾಷಿ, ಪರಿಸರ ಅರ್ಥಶಾಸ್ತ್, ಮಧ್ಯಕಾಲೀನ ಭಾರತ, ಸಮಾಜಶಾಸ್ತ್ರದ ಸ್ಥಾಪಕ ಪಿತಾಮಹರು, ಪ್ರಾರಂಭಿಕ ಹಂತದ ...
READ MORE