’ಅನೇಕ’ - ಇದೊಂದು ಬಹುಶಿಸ್ತೀಯ ಅಧ್ಯಯನದ ಲೇಖನಗಳ ಸಂಕಲನ. ಇದು ಪ್ರಾಚೀನ ಮತ್ತು ಮಧ್ಯಕಾಲೀನ ಸಾಹಿತ್ಯದೊಂದಿಗೆ ಶಾಸನಾಧ್ಯಯನದ ಮಹತ್ವ ಮತ್ತು ಮೌಲ್ಯಗಳನ್ನು ಪ್ರತಿಪಾಧಿಸುವ ಕೃತಿಯೂ ಹೌದು. ಹಳಗನ್ನಡ ಸಾಹಿತ್ಯ ಎಂದೂ ಮುಗಿಯದ ಅಕ್ಷಯನಿದಿಯಿದ್ದಂತೆ, ಬತ್ತದ ಒರತೆಯಿದ್ದಂತೆ. ಮೊಗೆದಷ್ಟೂ ಚಿಲುಮೆಯಾಗುತ್ತದೆ. ಅಧ್ಯಯನಕ್ಕೆ ಒಳಪಡಿಸಿದಷ್ಟೂ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಲೇ ಇರುತ್ತವೆ. ಅಂತಹ ಹೊಸ ದೃಷ್ಟಿಕೋನಗಳ ಒಂದು ಸಾಂದರ್ಭಿಕ ಪ್ರಯತ್ನವಾಗಿ ಟಿ. ಡಿ ರಾಜಣ್ಣ ತಗ್ಗಿಯವರ ವಿಮರ್ಶಾ ಲೇಖನಗಳ ಸಂಕಲನವಾದ ’ ಅನೇಕ’ ಎಂಬ ಕೃತಿ ಹೊರಬಂದಿದೆ.
ಕನ್ನಡದ ಯುವ ಸಂಶೋಧಕ, ಅನುವಾದಕ ಟಿ.ಡಿ. ರಾಜಣ್ಣ ತಗ್ಗಿ ಅವರು ಮೂಲತಃ ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನ ತಗ್ಗಿಹಳ್ಳಿಯವರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ, ಎಂ.ಫಿಲ್ ಮತ್ತು ಪಿಎಚ್.ಡಿ ಪದವಿಗಳನ್ನು ಪಡೆದಿರುವ ಅವರು ಮದರಾಸು ವಿಶ್ವವಿದ್ಯಾಲಯ ಹಾಗೂ ಜೈನ್ ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಹಲವಾರು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಮೌಲಿಕ ಪ್ರಬಂಧಗಳನ್ನು ಮಂಡಿಸಿರುವ ರಾಜಣ್ಣ ತಗ್ಗಿ ಅವರು ಮದರಾಸು , ಬೆಂಗಳೂರು ಮತ್ತು ಗುಲಬರ್ಗಾ ಆಕಾಶವಾಣಿ ಕೇಂದ್ರಗಳಲ್ಲಿಯೂ ಹಲವು ಸಾಹಿತ್ಯಿಕ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಕನ್ನಡ, ತೆಲುಗು, ತಮಿಳು, ಇಂಗ್ಲಿಷ್, ಭಾಷೆ ಬಲ್ಲವರಾಗಿದ್ದು, ...
READ MORE