ಕಥೆಗಾರ -ಲೇಖಕ ಅನು ಬೆಳ್ಳೆ (ರಾಘವೇಂದ್ರರಾವ್ ) ಅವರ ಕಥಾ ಸಂಕಲನ-ಅಂಗಡಿ. ಹಲವು ಪತ್ರಿಕೆಗಳಲ್ಲಿ ಪ್ರಕಟವಾದ ಕಥೆಗಳನ್ನು ಸಂಕಲಿಸಲಾಗಿದೆ. ಪ್ರತಿ ಕಥೆಯು ವಸ್ತು ವೈವಿಧ್ಯತೆ ಹೊಂದಿದ್ದು, ಸಾಮಾಜಿಕ ವಿದ್ಯಮಾನಗಳು, ವ್ಯಕ್ತಿಗತ ಸ್ವಾತಂತ್ಯ್ರ ಹೀಗೆ ಆಯಾಮಗಳನ್ನು ಹೊಂದಿದೆ. ಮನೋವೈಜ್ಞಾನಿಕ ನೆಲೆಯಲ್ಲೂ ಕೆಲವು ಕಥೆಗಳು ರೂಪುಗೊಂಡಿವೆ. ಪ್ರತೀ ಕಥೆಯು ವಿಶಿಷ್ಠ ನಿರೂಪಣಾ ಶೈಲಿಯನ್ನು ಒಳಗೊಂಡಿದೆ.
ವೃತ್ತಿಯಲ್ಲಿ ಉಪನ್ಯಾಸಕರಾಗಿರುವ ಅನು ಬೆಳ್ಳೆ ಅವರು ಮೂಲತಃ ಉಡುಪಿ ಜಿಲ್ಲೆಯ ಬೆಳ್ಳೆಯವರಾಗಿದ್ದು ಹುಟ್ಟಿದ್ದು ತಮಿಳುನಾಡಿನ ಮಧುರೈನಲ್ಲಿ. ಪ್ರಾಥಮಿಕ ಶಿಕ್ಷಣವನ್ನು ಪಡುಬೆಳ್ಳೆಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಗಿಸಿ, ಪ್ರೌಢ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಇನ್ನಂಜೆಯ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜ್ ನಲ್ಲಿ ಮುಗಿಸಿದ್ದರು. ಶಿರ್ವದ ಮೂಲ್ಕಿ ಸುಂದರ ರಾಮ ಶೆಟ್ಟಿ ಕಾಲೇಜಿನಲ್ಲಿ ಪದವಿಯನ್ನು ಪಡೆದು, ಧಾರವಾಡ ವಿಶ್ವವಿದ್ಯಾಲಯದಲ್ಲಿ ಎಂ.ಕಾಂ. ಸ್ನಾತಕೋತ್ತರ ಪದವಿಯನ್ನು ಮತ್ತು ಕುವೆಂಪು ವಿಶ್ವವಿದ್ಯಾಲಯದಲ್ಲಿ ಎಂ.ಎ. ಕನ್ನಡ ಸ್ನಾತಕೋತ್ತರ ಪದವಿಯನ್ನು ಪಡೆದರು. ಕನ್ನಡದ ಬಹುತೇಕ ಪತ್ರಿಕಗಳಲ್ಲಿ ಇವರ ಕಥೆ, ಕಾದಂಬರಿಗಳು ಪ್ರಕಟಗೊಂಡಿವೆ. ಈವರೆಗೆ ಐವತ್ತು ಕೃತಿಗಳನ್ನು ...
READ MORE