ಲೇಖಕ ಲಿಂಗಾರೆಡ್ಡಿ ಸೇರಿ ಅವರ ಲೇಖನಗಳ ಸಂಕಲನ-ಅಂತರಂಗ. 26 ಲೇಖನಗಳಿವೆ. ಬಹುತೇಕ ಲೇಖನಗಳು ಆಕಾಶವಾಣಿಯಿಂದ ಪ್ರಸಾರವಾಗಿವೆ. ಸಾಹಿತಿ ಸಿದ್ದಪ್ಪ ತಳ್ಳಳ್ಳಿ, ಸೇಡಂ ಅವರು ಮುನ್ಇನುಡಿ ಬರೆದು ‘ಜಾನಪದ ಹಾಡುಗಳು, ಶರಣರ ವಚನಗಳು, ದಾಸರು ಪದಗಳು ಹಾಗೂ ಗಾದೆ ಮಾತುಗಳನ್ನು ಸಂದರ್ಭಕ್ಕನುಸಾರವಾಗಿ ಬಳಸಿಕೊಂಡು ಉತ್ತಮ ಉದಾಹರಣೆಗಳೊಂದಿಗೆ ಮಾನವೀಯ ಮೌಲ್ಯಗಳನ್ನು ಉಳಿಸಿ ಬೆಳೆಸುವಲ್ಲಿ ಇಲ್ಲಿಯ ಲೇಖನಗಳು ಯಶಸ್ವಿಯಾಗಿವೆ ’ ಎಂದು ಪ್ರಶಂಸಿಸಿದ್ದಾರೆ. ವಸ್ತು ವೈವಿಧ್ಯತೆ, ನಿರೂಪಣಾ ಶೈಲಿ, ಸಾಮಾಜಿಕ ಹೊಣೆಗಾರಿಕೆಯಿಂದ ಲೇಖನಗಳು ಗಮನ ಸೆಳೆಯುತ್ತವೆ.
ಲೇಖಕ ಲಿಂಗಾರೆಡ್ಡಿ ಸೇರಿ ಅವರು ಮೂಲತಃ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಜಾಕನಹಳ್ಳಿ ಗ್ರಾಮದವರು. ತಂದೆ ಬಸರೆಡ್ಡಿ, ತಾಯಿ ವೀರಮ್ಮ. ಜಾಕನಹಳ್ಳಿ, ಕೊಲಕುಂದಾ ಹಾಗೂ ಮದನಾ ಗ್ರಾಮದಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಪೂರೈಸಿದರು. ಕಲಬುರಗಿಯ ಎಸ್.,ಬಿ. ಕಲಾ ಮಹಾವಿದ್ಯಾಲಯದಲ್ಲಿ ಪಿಯುಸಿ, ಕರ್ನಾಟಕ ವಿವಿ ಯಿಂದ ಬಿ.ಎ, ಹಾಗೂ ಬೆಂಗಳೂರು ವಿ.ವಿ.ಯಿಂದ ಬಿ.ಇಡಿ, ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದಿಂದ ತೆಲುಗು ಭಾಷೆಯಲ್ಲಿ ಡಿಪ್ಲೊಮಾ ಹಾಗೂ ಕರ್ನಾಟಕ ವಿ.ವಿ.ಯಿಂದ ಎಂ.ಎ. (ಬಾಹ್ಯ) ಪದವೀಧರರು. ಸಿರಿಗೆರೆಯ ಶ್ರೀ ತರಳಬಾಳು ವಿದ್ಯಾ ಸಂಸ್ಥೇಯಲ್ಲಿ ಶಿಕ್ಷಕ ವೃತ್ತಿ ಆರಂಭ, ನಂತರ ಅವರು ಕಡಕೋಳ, ತೂಲಹಳ್ಳಿ, ರಾಣೇಬೆನ್ನೂರು ಹೀಗೆ ...
READ MORE