ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಭಾರತ ಧ್ವಜವನ್ನು ಹಾರಿಸಿ ಭೂಗತರಾದವರು. ಇವರ ಮೂಲ ಹೆಸರು ಅರುಣಾ ಗಂಗೂಲಿ. ಅಸಫ್ ಅಲಿಯವರನ್ನು ಮದುವೆಯಾಗಿ ಅರುಣಾ ಅಸಫ್ ಅಲಿಯಾದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರಾಗಿದ್ದರು. ಕೆಲಕಾಲ ಮಾಸ್ಕೋದಲ್ಲಿದ್ದ ಇವರು ಕಮ್ಯುನಿಸಂ ತತ್ವಗಳಿಂದ ಆಕರ್ಷಿತರಾದರು. ಭಾರತಕ್ಕೆ ಬಂದು ಕಮ್ಯುನಿಸ್ಟ್ ಪಕ್ಷವನ್ನು ಸೇರಿದರು 1958ರಲ್ಲಿ ದಿಲ್ಲಿಯ ಪ್ರಥಮ ಚುನಾಯಿತ ಮೇರ್ ಆಗಿ ಆಯ್ಕೆಯಾದರು. ಹೀಗೆ ಸ್ವಾತಂತ್ಯ್ರ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಹೋರಾಟಗಾರ್ತಿ ಅರುಣಾ ಅವರ ಬದುಕು-ಸಾಧನೆಗಳ ಕುರಿತ ಸಂಕ್ಷಿಪ್ತ ಪರಿಚಯ ಇಲ್ಲಿದೆ. ಡಾ. ನಾ. ಸೋಮೇಶ್ವರ ಅವರು ಈ ಸಾಹಿತ್ಯವನ್ನು ಸಂಪಾದಿಸಿದ್ದಾರೆ.
ಗೀತಾ ಶೆಣೈ ಕನ್ನಡದ ಪ್ರಮುಖ ಲೇಖಕಿ. ಇವರು 1954 ಜೂಬ್ 13 ರಂದು ದಕ್ಷಿಣ ಜಿಲ್ಲೆಯಲ್ಲಿ ಜನಿಸಿದರು. ಹಂಪಿಯಿಂದ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಪಿಹೆಚ್.ಡಿ, ಪದವಿ ಪಡೆದಿದ್ದಾರೆ. ಇಂದಿರಾಗಾಂಧಿ ಮಹಿಳಾ ಅಧ್ಯಯನದಲ್ಲಿ ಸಿಡಬ್ಲ್ಯೂಇಡಿ ಕೋರ್ಸ್ ಮುಗಿಸಿದ್ದಾರೆ, ಜೀವನ ಚರಿತ್ರೆ, ಅನುವಾದ ಮತ್ತು ಮಹಿಳಾ ಅಧ್ಯಯನ ಇತ್ಯಾದಿ ಪ್ರಕಾರಗಳಲ್ಲಿ 20ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವರ ಮೊದಲ ಕೃತಿ ಝುಂಪಾ ಲಾಹಿರಿಯವರ ಇಂಟರ್ಪ್ರಿಟರ್ ಆಫ್ ಮ್ಯಾಲಡೀಸ್ ಕಥಾಸಂಕಲನದ ಅನುವಾದ `ಬೇನೆಗಳ ದುಭಾಷಿ'. ಬೇನೆಗಳ ದುಭಾಷಿ, ಪರಿಸರ ಅರ್ಥಶಾಸ್ತ್, ಮಧ್ಯಕಾಲೀನ ಭಾರತ, ಸಮಾಜಶಾಸ್ತ್ರದ ಸ್ಥಾಪಕ ಪಿತಾಮಹರು, ಪ್ರಾರಂಭಿಕ ಹಂತದ ...
READ MORE