‘ಅಶ್ರುತಗಾನ’ ಕೆ.ಟಿ.ಗಟ್ಟಿ ಅವರ ಕಾದಂಬರಿ. ಸುಧಾ ವಾರಪತ್ರಿಕೆಯ ಕಾದಂಬರಿ ಬಹುಮಾನ ಪಡೆದಿದೆ. ಪ್ರೀತಿಗಾಗಿ ನಡೆಯುವ ಹುಡುಕಾಟ ಈ ಕತೆಯ ಮುಖ್ಯವಸ್ತು. ಮನುಷ್ಯ ಬದುಕಿನಲ್ಲಿ ಏನೇ ಸಾಧಿಸಿದರು ಹಿಡಿ ಪ್ರೀತಿಗಾಗಿ ಅವನು ಹಂಬಲಿಸುವ ರೀತಿಯನ್ನು ಈ ಕೃತಿಯ ಮೂಲಕ ಕಟ್ಟಿಕೊಟ್ಟಿದ್ದಾರೆ. ತಮ್ಮ ವಿಭಿನ್ನ ಶೈಲಿಯ ಬರಹಗಳಿಂದ ಸೆಳೆವ ಗಟ್ಟಿಯವರ ಕತಾಶೈಲಿ ಓದಿಸಿಕೊಳ್ಳುವ ಗುಣಹೊಂದಿದೆ.
ಕಾದಂಬರಿಕಾರ, ಭಾಷಾತಜ್ಞ, ಸಮರ್ಥ ಪ್ರಾಧ್ಯಾಪಕರೆನಿಸಿದ ಕೆ.ಟಿ. ಗಟ್ಟಿಯವರು ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದರು. ತಂದೆ ಧೂಮಪ್ಪಗಟ್ಟಿಯವರು ಕೃಷಿಕರಾದರೂ ಯಕ್ಷಗಾನ ಕಲೆಯ ಬಗ್ಗೆ ಅಪಾರ ಒಲವಿದ್ದವರು. ತಾಯಿ ಪರಮೇಶ್ವರಿ ತುಳು-ಮಲಯಾಳಂ ಪಾಡ್ದನ ಹಾಡುಗಳನ್ನು ಕಲಿತವರು. ಉತ್ತಮ ಭಾಷೆ, ಆಕರ್ಷಕ ಶೈಲಿ, ಹೊಸ ಹೊಸ ವಸ್ತು, ಸರಳ ನಿರೂಪಣೆಗಳ ಮೂಲಕ ಕನ್ನಡ ಸಾರಸ್ವತ ಲೋಕದಲ್ಲಿ ಮನೆ ಮಾತಾದ ಹಿರಿಯ ಕಥೆಗಾರ ಕೆ.ಟಿ.ಗಟ್ಟಿ ಅವರು ಎಲ್ಲಾ ಓದುಗರಿಗೆ ಚಿರಪರಿಚಿತರು. ಕೇರಳ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಬಿಎಡ್ ಪದವಿ ಪಡೆದಿರುವ ಕೆ.ಟಿ.ಗಟ್ಟಿ ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯವರು. ಜನಿಸಿದ್ದು 1938ರಲ್ಲಿ. ಸದ್ಯ ...
READ MORE