ಡಾ.ಎಲ್.ಆರ್. ಹೆಗಡೆ ಅವರ ಅಪ್ರಕಟಿತ ಸಂಗ್ರಹ ಮಾಲೆಯಿಂದ ಆಯ್ದ ಜನಪದ ಕಥೆಗಳನ್ನು ಈ ಆಯ್ಕೆ ಮಾಡಿದ ಜನಪದ ಕಥೆಗಳಲ್ಲಿ ಪ್ರಕಟಿಸಲಾಗಿದೆ. ಈ ಕೃತಿಯನ್ನು ರೇಣುಕಾ ರಾಮಕೃಷ್ಣ ಭಟ್ಟ ಅವರು ಸಂಪಾದಿಸಿದ್ದಾರೆ.
ಜಾನಪದ ಭೀಷ್ಮ ಹಾಗೂ, ನಡೆದಾಡುವ ಜಾನಪದ ವಿಶ್ವಕೋಶ ಎಂದೇ ಖ್ಯಾತಿಯ ಡಾ.ಎಲ್.ಆರ್. ಹೆಗಡೆ ಅವರು ಜನಿಸಿದ್ದು1923ರಲ್ಲಿ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಹೊಲನಗದ್ದೆ ಅವರ ಹುಟ್ಟೂರು. ತಂದೆ ರಾಮಕೃಷ್ಣ ಹೆಗಡೆ, ತಾಯಿ ಮಹಾಲಕ್ಷ್ಮಿ. ಹೊಲನಗದ್ದೆಯಲ್ಲಿ ಪ್ರಾಥಮಿಕ ಶಿಕ್ಷಣ, ಗುಡೆ ಅಂಗಡಿಗಳಲ್ಲಿ ಹಾಗೂ ಕುಮಟಾದ ಗಿಬ್ ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ, ಬೆಳಗಾವಿಯ ಲಿಂಗರಾಜ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಪಡೆದರು. 1946ರಲ್ಲಿ , ಮುಂಬಯಿ ವಿಶ್ವ ವಿದ್ಯಾಲಯದಿಂದ ಬಿ.ಎ. ಪದವಿಯನ್ನು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದರು. 1949ರಲ್ಲಿ ಬಿ.ಟಿ.ಪರೀಕ್ಷೆ ಉತ್ತೀರ್ಣರಾದರು ಹಾಗೂ 1950ರಲ್ಲಿ ಪುಣೆ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ...
READ MORE