ಹಿರಿಯ ಸಾಹಿತಿ ರಂ.ಶ್ರೀ ಮುಗಳಿ ಅವರು ಬರೆದ ಕಾದಂಬರಿ. ನಿರುದ್ಯೋಗ ತಾಂಡವವಾಡುತ್ತಿದ್ದು, ಈ ಸಮಸ್ಯೆಗೆ ಪರಿಹಾರ ಹೇಗೆ ಎಂಬುದು ಕಾದಂಬರಿಯ ವಸ್ತು. ಕಾದಂಬರಿಯನ್ನು ಬೆಟಗೇರಿ ಕೃಷ್ಣಶರ್ಮ ಹಾಗೂ ಗೋವಿಂದ ಭಿ. ಜೋಶಿ ಅವರು ಸಂಪಾದಿಸಿದ್ದಾರೆ. ನಿರುದ್ಯೋಗದಂತಹ ಸನ್ನಿವೇಶದಲ್ಲಿ ನೌಕರಿಗಾಗಿ ನಾಲ್ವರು ತರುಣರು ಹೇಗೆ ತಮ್ಮ ಜೀವನದ ಅಮೂಲ್ಯ ಭಾಗವನ್ನು ಹಾಳು ಮಾಡಿಕೊಳ್ಳುತ್ತಾರೆ ಎಂಬುದು ಕಥೆಯ ವಸ್ತು.
ಕನ್ನಡ ಸಾಹಿತ್ಯ ಚರಿತ್ರೆಯ ಮೂಲಕ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾದ ರಂಗನಾಥ ಶ್ರೀನಿವಾಸ ಮುಗಳಿ ಕನ್ನಡದ ಪ್ರಮುಖ ಲೇಖಕರಲ್ಲಿ ಒಬ್ಬರು. 1906ರ ಜುಲೈ 15ರಂದು ಜನಿಸಿದರು. ತಂದೆ ಶ್ರೀನಿವಾಸರಾವ್ ಮತ್ತು ತಾಯಿ ಕಮಲಕ್ಕ. ಬಾಗಲಕೋಟೆ, ಬಿಜಾಪುರಗಳಲ್ಲಿ ಶಾಲಾ ಶಿಕ್ಷಣ ಮುಗಿಸಿ ಕರ್ನಾಟಕ ಕಾಲೇಜಿನಲ್ಲಿ ಬಿ.ಎ. (1928) ಎಂ.ಎ. (1930) ಮಾಡಿದರು. 1932ರಲ್ಲಿ ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಶಿಕ್ಷಕರಾಗಿ ಸೇರಿದರು. 1933ರಲ್ಲಿ ಸಾಂಗ್ಲಿಯ ವಿಲ್ಲಿಂಗ್ಟನ್ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ವಿಲ್ಲಿಂಗ್ಟನ್ ಕಾಲೇಜಿನಲ್ಲಿ ಪ್ರಿನ್ಸಿಪಾಲ್ ಆಗಿ 1966ರಲ್ಲಿ ನಿವೃತ್ತರಾದರು. ಕೆಲವು ಕಾಲ ಸರಕಾರದ ಸಾಹಿತ್ಯ ಸಂಸ್ಕೃತಿ ಇಲಾಖೆಯಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. ...
READ MORE