ಹಿರಿಯ ಸಾಹಿತಿ ಬನ್ನಂಜೆ ಗೋವಿಂದಾಚಾರ್ಯ ಅವರ 80ನೇ ಹುಟ್ಟುಹಬ್ಬದ ಸಂಭ್ರಮದ ದ್ಯೋತಕವಾಗಿ ಪ್ರಕಟವಾದ ಕೃತಿ-ಬನ್ನಂಜೆ ಷಡ್ದರ್ಶನ. ವಿದ್ವಾಂಸ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಹಾಗೂ ವೀಣಾ ಬನ್ನಂಜೆ ಅವರು ರಚಿಸಿದ್ದು, ಬನ್ನಂಜೆ ಗೋವಿಂದಾಚಾರ್ಯರ ವಿದ್ವತ್ತು, ನಯ-ವಿನಯ-ಸರಳತೆ, ಸಾಹಿತ್ಯಕ ಸಾಧನೆ, ಪ್ರಶಸ್ತಿ ಪುರಸ್ಕಾರಗಳೂ ಸೇರಿದಂತೆ ಬನ್ನಂಜೆ ಅವರು ಒಟ್ಟು ವ್ಯಕ್ತಿತ್ವವನ್ನು ಕಟ್ಟಿಕೊಡುವ ಪ್ರಯತ್ನ ಈ ಕೃತಿ.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಮೊದಲ ಕುಲಪತಿಗಳಾಗಿದ್ದ ಮಲ್ಲೇಪುರಂ ಜಿ. ವೆಂಕಟೇಶ ಅವರು 1952, ಜೂನ್ 5ರಂದು ಬೆಂಗಳೂರು ಜಿಲ್ಲೆಯ ನೆಲಮಂಗಲದಲ್ಲಿ ಜನಿಸಿದರು. ತಂದೆ ಗಂಗಯ್ಯ, ತಾಯಿ ವೆಂಕಟಮ್ಮ. ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾಭ್ಯಾಸ ನೆಲಮಂಗಲದ ಸರ್ಕಾರಿ ಮತ್ತು ಹೈಯರ್‌ಸೆಕೆಂಡರಿ ಶಾಲೆ. ಮೊದಲ ಸಂಸ್ಕೃತ-ಕನ್ನಡ ಗುರುಗಳು ಎಸ್.ವಿ. ರಾಮಸ್ವಾಮಿ ಅಯ್ಯಂಗಾರ್. ಸಿದ್ಧಗಂಗಾ ಮಠದಲ್ಲಿ ಕನ್ನಡ ಪಂಡಿತ್ ಮತ್ತು ಸಂಸ್ಕೃತ ಅಲಂಕಾರವಿದ್ವತ್ ವ್ಯಾಸಂಗ. ವಿದ್ವಾನ್ ಬಿ. ವೆಂಕಟರಾಮಭಟ್ಟ, ಇವರಲ್ಲಿ ಕಾವ್ಯಾಲಂಕಾರಗಳ ಅಧ್ಯಯನ. ಬೆಂಗಳೂರಿನ ಶ್ರೀರಾಮಕೃಷ್ಣಾಶ್ರಮದಲ್ಲಿ ಸ್ವಾಮಿ ಆದಿದೇವಾನಂದರಿAದ ಅದ್ವೈತ ವೇದಾಂತದ ಅನುಗ್ರಹ. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ., ಮೂರನೇ ರ‍್ಯಾಂಕಿನೊಡನೆ ಕುವೆಂಪು ಚಿನ್ನದ ...
READ MORE