ಕರ್ನಾಟಕ ಸಾಹಿತ್ಯ ಅಕೆಡೆಮಿ ಪುಸ್ತಕ ಬಹುಮಾನ ಪಡೆದ ಈ ಕೃತಿಯು ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅನಕ್ಷರಸ್ಥ ಹಾಲಕ್ಕಿ ಮಹಿಳೆಯೊಬ್ಬಳು ನಡೆಸಿದ ಸಾರಾಯಿ ವಿರೋಧಿ ಆಂದೋಲನದ ಹೋರಾಟದ ಕತೆಯನ್ನು ಒಳಗೊಂಡಿದೆ, ಈ ಕೃತಿಗೆ ಎರಡನೇ ಬಾರಿ ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ ಹಾಗೂ ವಿಜಯಾ ಸುಬ್ಬರಾವ್ ಸಾಹಿತ್ಯ ಪ್ರಶಸ್ತಿ ದೊರೆತಿದೆ. ಮುಂಬೈ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಎಂ.ಎ ಮೊದಲ ವರ್ಷಕ್ಕೆ ಆರು ವರ್ಷಗಳ ಕಾಲ ಪಠ್ಯ ಪುಸ್ತಕವಾಗಿತ್ತು.
ಕಥೆಗಾರ್ತಿ ಸ್ತ್ರೀವಾದಿ ಸುನಂದಾ ಕಡಮೆ ಉತ್ತರ ಕನ್ನಡ ಜಿಲ್ಲೆ, ಅಂಕೋಲಾ ತಾಲ್ಲೂಕಿನ ಅಲಗೇರಿ ಗ್ರಾಮದವರು. ಸಮಕಾಲೀನ ವಿಷಯಗಳ ಕುರಿತು ಬರೆಯುವ ಸುನಂದಾ ಅವರು ಪುಟ್ಟ ಪಾದದ ಗುರುತು, ಗಾಂಧಿ ಚಿತ್ರದ ನೋಟು, ಕಂಬಗಳ ಮರೆಯಲ್ಲಿ, ತುದಿ ಮಡಚಿಟ್ಟ ಪುಟ ಇವು ನಾಲ್ಕು ಕಥಾಸಂಕಲನಗಳು. ಬರೀ ಎರಡು ರೆಕ್ಕೆ, ದೋಣಿ ನಡೆಸೊ ಹುಟ್ಟು, ಹೈವೇ ನಂ. 63, ಎಳೆನೀರು ಇವು ನಾಲ್ಕು ಕಾದಂಬರಿಗಳು. ಪಿಸುಗುಡುವ ಬೆಟ್ಟಸಾಲು, ಪಡುವಣದ ಕಡಲು, ಕತೆಯಲ್ಲದ ಕತೆ ಇವು ಮೂರು ಪ್ರಬಂಧ ಸಂಕಲನಗಳು ಹಾಗೂ ಸೀಳುದಾರಿ ಎಂಬ ಕವನ ಸಂಕಲನಗಳು ಹೊರಬಂದಿವೆ. ಇವರಿಗೆ ಗುಡಿಬಂಡೆ ...
READ MOREಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ-2011