‘ ಧಾರವಾಡದ ಬೆಣ್ಣೆ ಧಾರಣೀನೆ ಆಗಲಗಲೊಲ್ಲದು ’ ಎಂದು ಕವಿ ಅಂಬಿಕಾತನಯದತ್ತರು ತಮ್ಮ ಒಂದು ಸಾಲಿನಲ್ಲಿ ತಮ್ಮ ಕಾವ್ಯ ಮೌಲೀಕರಣದ ಅಪೂರ್ಣನತೆಯ ಬಗ್ಗೆ ಆತೃಪ್ತಿಯನ್ನು ವ್ಯಕ್ತಪಡಿಸಿದ್ದು, ಆಚಾರ್ಯರ ಈ ವಿಮರ್ಶ ಕೃತಿ ಅದನ್ನು ಈಡೇರಿಸಿ ಬೇಂದ್ರೆ ಕಾವ್ಯ ಮೌಲೀಕರಣ ಪ್ರಯತ್ನಗಳಿಗೆ ಪೂರ್ಣ ವಿರಾಮ ಕೊಟ್ಟಂತಿದೆ ಎಂದು ಎನ್ಕೆ ಅವರು ಅಭಿಪ್ರಾಯ ಪಟ್ಟಿದ್ದಾರೆ.
ಹಿರಿಯ ವಿದ್ವಾಂಸ ಹಾಗೂ ಪ್ರವಚನಕಾರರೂ ಆಗಿರುವ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ...
READ MORE