ಕವಿ ದೊಡ್ಡರಂಗೇಗೌಡರ ಕೃತಿ-ಬೆಟ್ಟದ ಮುಡಿಯ ಬೆಳಕು. ನೃತ್ಯಕ್ಕೆ ಸರಿ ಹೊಂದುವ ಉದ್ದದ ಕವಿತೆಗಳನ್ನು ಪ್ರಗಾಥ ಎಂದು ಕರೆಯುತ್ತಾರೆ. ಇಂತಹ ಕವಿತೆಗಳಿರುವ ಸಂಕಲನವಿದು. ಕಾವ್ಯವಸ್ತು, ಶೈಲಿಯಿಂದ ಓದುಗರ ಗಮನ ಸೆಳೆಯುತ್ತವೆ.
ಕವಿ, ಸಾಹಿತಿ ಮನುಜ ಕಾವ್ಯನಾಮದ ಮೂಲಕ ಪರಿಚಿತರಾಗಿರುವ ದೊಡ್ಡರಂಗೇಗೌಡ ಅವರು, ತುಮಕೂರು ಜಿಲ್ಲೆ ಕುರುಬರಹಳ್ಳಿಯಲ್ಲಿ 1946 ಫೆಬ್ರುವರಿ 7ರಂದು ಜನಿಸಿದರು. ತಂದೆ ರಂಗೇಗೌಡ, ತಾಯಿ ಅಕ್ಕಮ್ಮ. ಬೆಂಗಳೂರು ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಇವರು, ‘ಕನ್ನಡ ನವೋದಯ ಕಾವ್ಯ- ಒಂದು ಪುನರ್ಮೌಲ್ಯಮಾಪನ ’ ಎಂಬ ಪ್ರಬಂಧ ಮಂಡಿಸಿ ಪಿಎಚ್ಡಿ ಪಡೆದರು. ಬೆಂಗಳೂರಿನ ಎಸ್.ಎಲ್.ಎನ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕಾಲೇಜು ದಿನಗಳಲ್ಲೇ ಕವನ, ಕತೆ ರಚನೆಯಲ್ಲಿ ತೊಡಗಿಕೊಂಡಿದ್ದ ಇವರು ಸುಮಾರು 500ಕ್ಕೂ ಹೆಚ್ಚು ಚಲನಚಿತ್ರ ಗೀತೆಗಳನ್ನು ಬರೆದಿದ್ದಾರೆ. ಕಾವ್ಯ, ವಿಮರ್ಶಾ ಕೃತಿಗಳು, ಭಾವಗೀತೆ ಹಾಗೂ ...
READ MORE