ಭಾರತೀಯ ಕಲೆ

Author : ಎನ್. ಮರಿಶಾಮಾಚಾರ್

Pages 224

₹ 80.00




Year of Publication: 2001
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- 560002

Synopsys

‘ಭಾರತೀಯ ಕಲೆ’ ಲೇಖಕ ಎನ್. ಮರಿಶಾಮಾಚಾರ್ ಅವರ ಕೃತಿ. ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಟಿಸಿದ್ದು, ಅಂದಿನ ಅಧ್ಯಕ್ಷ ಡಾ. ಸಿದ್ದಲಿಂಗಯ್ಯನವರು ಬೆನ್ನುಡಿ ಬರೆದಿದ್ದಾರೆ. ಕರ್ನಾಟಕದಲ್ಲಿ ಚಿತ್ರ, ಶಿಲ್ಪಕಲಾ ಕ್ಷೇತ್ರದಲ್ಲಿ ಶ್ರೀ ಮರಿಶಾಮಾಚಾರ್ ಬಹುಮಂದಿ ಬಲ್ಲ ಹೆಸರು. ಸ್ವತಃ ಚಿತ್ರ, ಶಿಲ್ಪಕಲಾವಿದರಾದ ಇವರು, ಕನ್ನಡದಲ್ಲಿ ಕಲಾ ಪ್ರಕಾರದಲ್ಲಿ ಬರೆದ ಕೆಲವೇ ಲೇಖಕರಲ್ಲಿ ಒಬ್ಬರು. ಇವರ ಭಾರತೀಯ ಕಲೆ ಕೃತಿಯು ಚಿತ್ರ, ಶಿಲ್ಪಕಲಾಭ್ಯಾಸಿಗಳಿಗೆ ಆಕರ ಗ್ರಂಥದಂತಿದೆ. ಈ ಗ್ರಂಥಕ್ಕೆ ಕಲಾವಿದರು ಮತ್ತು ಆಸಕ್ತರಿಂದ ಬಂದ ಬೇಡಿಕೆ ಕೃತಿಯ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎನ್ನುತ್ತಾರೆ ಡಾ. ಸಿದ್ಧಲಿಂಗಯ್ಯ.

About the Author

ಎನ್. ಮರಿಶಾಮಾಚಾರ್
(15 May 1951 - 03 April 2013)

ಕರ್ನಾಟಕದ ಕಲಾವಲಯದ ಹಿರಿಯರು ’ಮರಿ’ ಎಂದು ಕರೆಯುತ್ತಿದ್ದ ಎನ್. ಮರಿಶಾಮಾಚಾರ್‌ ಅವರು ರಾಜ್ಯದ ಅಪರೂಪದ ಕಲಾಪರಿಚಾರಕ-ಲೇಖಕ. ಕರ್ನಾಟಕ ಶಿಲ್ಪಕಲಾ ಅಕಾಡೆಮಿ ರಿಜಿಸ್ಟ್ರಾರ್‌  ಆಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದ ಮರಿಶಾಮಾಚಾರ್‌ ಅವರು ಕಲಾಸಾಹಿತಿ. ’ನಡೆದಾಡುವ ಕಲಾಕೋಶ’ ಎಂದು ಕಲಾವಲಯದಲ್ಲಿ ಅವರನ್ನು ಗುರುತಿಸಲಾಗುತ್ತಿತ್ತು. ವಿಜಯಪುರದಲ್ಲಿ 1951ರ ಮೇ 15ರಂದು ಜನಿಸಿದ ಮರಿಶಾಮಾಚಾರ್‌ ಅವರು ಜಯನಗರದ ಆರ್‌.ವಿ. ಹೈಸ್ಕೂಲಿನಲ್ಲಿ ಓದುತ್ತಿರುವಾಗ ಡ್ರಾಯಿಂಗ್ ಮಾಡಲು ಆರಂಭಿಸಿದ್ದರು. ಅವರ ಅಣ್ಣ ಕೆನ್‌ ಶಾಲೆಯ ವಿದ್ಯಾರ್ಥಿಯಾಗಿದ್ದ. ಕಲೆಯ ಅಭಿರುಚಿ ಬಂದದ್ದು ಅವರ ಅಣ್ಣನಿಂದಲೇ. ಅಣ್ಣನ ಮೂಲಕ ಪರಿಚಯವಾದ ಕಲಾಗುರು ಆರ್‌.ಎಂ. ಹಡಪದ ಅವರ ಶಿಷ್ಯರಾಗಿದ್ದ ’ಮರಿ’ ಅವರು ಅವರ ಬಳಿ ಐದು ವರ್ಷ ...

READ MORE

Related Books