ಭಾರತದಲ್ಲಿ ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ರಾಷ್ಟ್ರದ ಪರಿಕಲ್ಪನೆಯೊಂದಿಗೆ ಕಾದಂಬರಿ ಪ್ರಕಾರ ಉಗಮವಾಯಿತು ಎನ್ನುತ್ತಾರೆ ಕೆಲ ಸಾಹಿತ್ಯ ಚರಿತ್ರೆಕಾರರು. ಬಹುಭಾಷಾ ಪರಂಪರೆ ಆಯಾ ಚಾರಿತ್ರಿಕ-ಸಾಮಾಜಿಕ ಘಟ್ಟಗಳಲ್ಲಿ ಸಾಹಿತ್ಯದ ಪ್ರಕಾರದ ಮೇಲೆ ಬೀರಿರುವ ಪರಿಣಾಮಗಳನ್ನು ಈ ಕೃತಿ ಪರಿಶೋಧಿಸುವ ಪ್ರಯತ್ನಮಾಡಿದೆ. ಇದು ಅನುವಾದಿತ ಕೃತಿಯಾಗಿದ್ದು ಇಲ್ಲಿ ಸಾಹಿತ್ಯ ವಿಮರ್ಶಕರು, ಚರಿತ್ರಕಾರರು ಮತ್ತು ರಾಜಕೀಯ ತಾತ್ವಿಕ ಸಿದ್ದಾಂತಕಾರರು ರಚಿಸಿದ ಹದಿನಾಲ್ಕು ಪ್ರಬಂಧಗಳು ಇವೆ. ಅವು ವಿವಿಧ ಭಾರತೀಯ ಭಾಷೆಗಳಲ್ಲಿನ ಮೊದಲ ಕಾದಂಬರಿಗಳನ್ನು ಮತ್ತು ಅವು ರಚನೆಗೊಂಡ ಸಂದರ್ಭಗಳನ್ನು ವಿಶ್ಲೇಷಿಸುತ್ತದೆ.
©2024 Book Brahma Private Limited.