ಶರಣಗೌಡ ಬಿ. ಪಾಟಳ, ತಿಳಗೂಳ ಅವರ ಕಾದಂಬರಿ-ಭೀಮಾ ತೀರದ ತಂಗಾಳಿ. ರೈತ ಮಹಿಳೆಯೊಬ್ಬಳು ಬಂಜರು ಭೂಮಿಯಲ್ಲಿ ಬಂಗಾರದ ಬೆಳೆ ಬೆಳೆದು ಸಾಧಿಸಿ ತೋರಿಸುತ್ತಾಳೆ . ಭೀಮಾ ತೀರದ ಜನರ ಬದುಕಿಗೆ ಶಕ್ತಿ ತುಂಬುತ್ತಾಳೆ ಇವಳ ಪರಿಶ್ರಮ ಮತ್ತು ಸೇವಾ ಮನೋಭಾವ ಅನನ್ಯ . ಆದರೂ, ಜೀವನದಲ್ಲೇ ನೋವು ಸಂಕಟ ಅನುಭವಿಸಿದ ಚಿತ್ರಣವೇ ಈ ಕಾದಂಬರಿಯ ವಸ್ತು. ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.
ಕೃತಿಗೆ ಬೆನ್ನುಡಿ ಬರೆದ ಸಾಹಿತಿ ಡಾ. ಸ್ವಾಮಿರಾವ್ ಕುಲಕರ್ಣಿ ‘ಈ ಕಾದಂಬರಿಯ ಕಥಾ ವಸ್ತುವು ಗ್ರಾಮೀಣ ಜನಜೀವನದೊಂದಿಗೆ ತಳುಕು ಹಾಕಿಕೊಂಡಿದೆ. ಆರಂಭದಿಂದ ಅಂತ್ಯದವರೆಗೂ ಕಾದಂಬರಿ ಕುತೂಹಲ ಮೂಡಿಸುತ್ತಾ ಹೋಗುತ್ತದೆ’ ಎಂದು ಪ್ರಶಂಸಿಸಿದ್ದಾರೆ.
ಲೇಖಕ ಶರಣಗೌಡ ಪಾಟೀಲ ಅವರು ಕಲಬುರಗಿ ಜಿಲ್ಲೆಯ ತಿಳಗೂಳ ಗ್ರಾಮದವರು. ಸ್ನಾತಕೋತ್ತರ ಪದವೀಧರರು. ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೃತಿಗಳು: ಹಿಟ್ಟಿನ ಗಿರಣಿ ಕಿಟ್ಟಪ್ಪ (ಲಲಿತ ಪ್ರಬಂಧಗಳ ಸಂಕಲನ)’, ತೊರೆದ ’ಗೂಡು (ಕಾದಂಬರಿ), ಕೆಂಪು ಶಲ್ಯ ಫಕೀರೂ ಹಾಗೂ ಇತರ ಕಥೆಗಳು (ಕಥಾ ಸಂಕಲನ), ಕಾಳು ಕಟ್ಟದ ಕಣ್ಣೀರು, ಭೀಮಾ ತೀರದ ತಂಗಾಳಿ (ಕಾದಂಬರಿಗಳು) ಪ್ರಶಸ್ತಿ-ಪುರಸ್ಕಾರಗಳು: ಇವರ ‘ಹಿಟ್ಟಿನ ಗಿರಣಿ ಕಿಟ್ಟಪ್ಪ ಕೃತಿಗೆ 2017-18 ನೇ ಸಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಡಿ ಮಾಣಿಕರಾವ ಹಾಸ್ಯ ಸಾಹಿತ್ಯ ದತ್ತಿ ಪ್ರಶಸ್ತಿ ಲಭಿಸಿದೆ. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ. ಶಿಕ್ಷಕರ ಕಲ್ಯಾಣ ನಿಧಿಯ ರಾಜ್ಯ ಮಟ್ಟದ ...
READ MORE